ಉಡುಪಿ : ಬ್ರಹ್ಮಾವರ ತಾಲೂಕಿನ ಹೆಗ್ಗುಂಜೆ ಗ್ರಾಮದ ನಿರ್ಜನ ಪ್ರದೇಶದಲ್ಲಿ ಬೆಂಗಳೂರು ಮೂಲದ ಯುವ ಜೋಡಿ ಕಾರಿಗೆ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತ ವ್ಯಕ್ತಿಗಳನ್ನು ಬೆಂಗಳೂರಿನ ಆರ್.ಟಿ. ನಗರದ ಯಶವಂತ್ ಯಾದವ್ ಮತ್ತು ಜ್ಯೋತಿ ಎಂದು ಗುರುತಿಸಲಾಗಿದೆ. ಭಾನುವಾರ ಬೆಳಗಿನ ಜಾವ 3ಗಂಟೆ ಸುಮಾರಿಗೆ ಬೆಂಕಿ ಹೊತ್ತಿ ಉರಿಯುವುದನ್ನು ನೋಡಿದ ಸ್ಥಳೀಯರು ವಿದ್ಯುತ್ ಅವಘಡ ಆಗಿರಬಹುದೇ ಎಂದು ಎದ್ದು ಬಂದು ನೋಡಿದರೆ ಹೊತ್ತಿ ಉರಿಯುವ ಕಾರು ಪತ್ತೆಯಾಗಿದೆ. ಸ್ಥಳೀಯರ ನೆರವಿನಿಂದ ಬೆಂಕಿಯನ್ನು ನಂದಿಸಿದ್ದು ಈ ವೇಳೆ
ಕಾರಿನಲ್ಲಿ ಎರಡು ಮೃತದೇಹಗಳು ಪತ್ತೆಯಾಗಿವೆ.
ಮೂಲಗಳ ಪ್ರಕಾರ ತಮ್ಮ ಮದುವೆಗೆ ಮನೆಯವರ ಕಡೆಯಿಂದ ತೀವ್ರವಾದ ವಿರೋಧ ಇತ್ತೆನ್ನಲಾಗಿದೆ.ಯುವ ಜೋಡಿ ಇತ್ತೀಚಿಗಷ್ಟೇ ಮದುವೆಯಾಗಿ ಸಂಬಂಧಿಕರ ಹೊರತಾಗಿ ಜೀವನ ನಡೆಸಲು ಸಾಧ್ಯವಾಗದೇ ಆತ್ಮಹತ್ಯೆಗೆ ನಿರ್ಧರಿಸಲಾಗಿದೆ ಎಂದು ಆತ್ಮಹತ್ಯೆ ಮಾಡಿಕೊಂಡ ಯಶವಂತ್ ನ ಮೊಬೈಲ್ ಮೆಸೇಜ್ ನಿಂದ ತಿಳಿದುಬಂದಿದೆ ಎಂದು ಮಾಹಿತಿ ಲಭ್ಯವಾಗಿದೆ.














