ಚಾಮರಾಜನಗರ:ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ನಿನ್ನೆ ಬಿ.ಎಸ್ ಯಡಿಯೂರಪ್ಪನವರು ರಾಜೀನಾಮೆ ನೀಡಿದ್ದರಿಂದ ಬೇಸತ್ತು ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ರಾಜಪ್ಪ (ರವಿ) ಸಾವಿಗೆ ಶರಣಾದ ದುರ್ದೈವಿ.
ಈ ಕುರಿತು ಯಡಿಯೂರಪ್ಪನವರು ಟ್ವೀಟ್ ಮಾಡಿ ಸಂತಾಪು ಸೂಚಿಸಿದ್ದಾರೆ.ಜೊತೆಗೆ ಯಾರೂ ಅತಿರೇಕಕ್ಕೆ ಹೋಗಬಾರದೆಂದು ಮನವಿ ಮಾಡಿದ್ದಾರೆ.
“ನನ್ನ ರಾಜೀನಾಮೆಯಿಂದ ಮನನ್ನೊಂದ ಗುಂಡ್ಲುಪೇಟೆ ತಾ॥ ಬೊಮ್ಮಲಾಪುರದ
ರಾಜಪ್ಪ (ರವಿ) ಆತ್ಮಹತ್ಯೆಗೆ ಶರಣಾದ ಸುದ್ದಿ ಅತೀವ ನೋವು ಹಾಗೂ ಬೇಸರ ತರಿಸಿದೆ. ರಾಜಕಾರಣದಲ್ಲಿ ಏರಿಳಿತಗಳು ಸಹಜ, ಇದಕ್ಕಾಗಿ ಪ್ರಾಣಾರ್ಪಣೆ ಮಾಡಿಕೊಳ್ಳಲು ಮುಂದಾಗುವುದು ಸರ್ವಥಾ ಒಪ್ಪಲಾಗದು, ಇದರಿಂದ ಕುಟುಂಬಕ್ಕಾಗುವ ನಷ್ಟ ಯಾರಿಂದಲೂ ಭರಿಸಲಾಗದು” ಎಂದು ಯಡಿಯೂರಪ್ಪ ತಿಳಿಸಿದ್ದಾರೆ.















