ಬೆಂಗಳೂರು :ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಮಾಡಬೇಕೆಂದು ಬಹಿರಂಗವಾಗಿಯೇ ರಾಜ್ಯ ಸರ್ಕಾರದ ವಿರುದ್ದ ಸಮರ ಸಾರಿರುವ ಸಚಿವ ಸಿ.ಪಿ. ಯೋಗೇಶ್ವರ್ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಲ್ಲಿ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.
ಅರುಣ್ ಸಿಂಗ್ ನಡೆಸಿದ ಸಚಿವರ ಪ್ರತ್ಯೇಕ ಸಭೆಯಲ್ಲಿ ಸಿ.ಪಿ.ಯೋಗೇಶ್ವರ್ ಸಿ ಯಂ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ .ಸಿಎಂ ಬಿಎಸ್ ಯಡಿಯೂರಪ್ಪನವರು ಎಚ್ ಡಿ ಕುಮಾರಸ್ವಾಮಿ ಹಾಗೂ ಡಿಕೆ ಶಿವಕುಮಾರ್ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ.ಇದು ಮೂರೂ ಪಕ್ಷಗಳ ಸರಕಾರ ಎಂದಿದ್ದಾರೆ.ಸಿಯಂ ಪುತ್ರ ವಿಜಯೇಂದ್ರ ಎಲ್ಲಾ ಇಲಾಖೆಗಳಲ್ಲಿ ಹಸ್ತಕ್ಷೇಪದ ಮಾಡುತ್ತಿದ್ದರೆ.ಮುಂದಿನ ಚುನಾವಣೆಗೆ
ಇದೇ ರೀತಿ ಹೋದರೆ ಪಕ್ಷಕ್ಕೆ ಭಾರಿ ಹೊಡೆತ ಬೀಳುವ ಸಾದ್ಯತೆ ಇದೆ.ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ರಾಮನಗರ ಜಿಲ್ಲೆಯಲ್ಲಿ ನಮ್ಮ ಸರ್ಕಾರ ಇದ್ದರೂ ಕುಮಾರಸ್ವಾಮಿ ಹಾಗೂ ಡಿಕೆಶಿ ಪರ ಅಧಿಕಾರಿಗಳನ್ನೇ ಹಾಕಿಕೊಡಲಾಗಿದೆ.ಮತ್ತು ಹೆಚ್ ಡಿ ಕೆ , ಡಿಕೆಶಿ , ಸಿದ್ದರಾಮಯ್ಯ ಕ್ಷೇತ್ರಗಳಿಗೆ ಅತಿಹೆಚ್ಚು ಅನುದಾನ ನೀಡಲಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆಂಬ ಮಾಹಿತಿ ಇದೆ.














