Coastal Bulletin

ಪ್ರಸ್ತುತ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಎಲ್​ ಮುರುಗನ್ ಕೆಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಡೇರಿ ಖಾತೆ ಸಚಿವರಾಗಿ ಅಯ್ಕೆಯಾದ ಕಾರಣದಿಂದ ತೆರವಾದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಿಸಲಾಗಿದೆ. ಈ ಕುರಿತು ಬಿಜೆಪಿ ಹೈಕಮಾಂಡ್ ಅಧಿಕೃತ ಆದೇಶ ಹೊರಡಿಸಿದೆ.

2024 ರ ಲೋಕಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಆ ಸ್ಥಾನಕ್ಕೆ ಕೆ. ಅಣ್ಣಾಮಲೈ ಸೂಕ್ತ ಅಭ್ಯರ್ಥಿ ಎಂದು ತೀರ್ಮಾನಿಸಿ ಈ ನಿರ್ಧಾರ ತೆಗೆದುಕೊಂಡಿದೆ.ಅಣ್ಣಾಮಲೈ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ  ಅರವಕುರಿಚಿ

ಕ್ಷೇತ್ರದಿಂದ ಸ್ಪರ್ಧಿಸಿ ಸೋತರೂ ವೈಯಕ್ತಿಕ ವರ್ಚಸ್ಸು, ಜನಪ್ರಿಯತೆಯನ್ನು ಉಳಿಸಿಕೊಂಡಿದ್ದಾರೆ.ಪಕ್ಷವನ್ನು ಮುನ್ನಡೆಸುವ ನಾಯಕತ್ವ ಗುಣ ಅವರಲ್ಲಿದೆ. ಹೀಗಾಗಿ ತಮಿಳುನಾಡು ಅಧ್ಯಕ್ಷ ಸ್ಥಾನವನ್ನು ಅಣ್ಣಾಮಲೈ ಅವರಿಗೆ ನೀಡಬೇಕು ಎಂದು ಬಿಜೆಪಿ ಅಭಿಮಾನಿಗಳು ಒತ್ತಾಯಿಸಿದ್ದರು.

Leave a Comment