ಕೇರಳದಲ್ಲಿ ಭಾರೀ ಮಳೆ: ಕಾಸರಗೋಡು ಸೇರಿ 7 ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

Coastal Bulletin
ಕೇರಳದಲ್ಲಿ ಭಾರೀ ಮಳೆ: ಕಾಸರಗೋಡು ಸೇರಿ 7 ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಪೂರ್ವದಲ್ಲಿ ಬಂಗಾಳಕೊಲ್ಲಿ ಮತ್ತು ಪಶ್ಚಿಮದಲ್ಲಿ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಇಂದಿನಿಂದ ಮುಂದಿನ 3 ದಿನಗಳ ಕಾಲ ಭಾರೀ ಮಳೆಯಾಗು ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಚ್ಚಿ, ಎರ್ನಾಕುಲಂ, ತ್ರಿಶೂಲ್, ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್, ವಯನಾಡ್ ಕಣ್ಣೂರು ಹಾಗೂ ಕಾಸರಗೋಡು ಜಿಲ್ಲೆಗಳಿಗೆ ಇಂದಿನಿಂದ ಧಾರಕಾರ ಮಳೆಯಿರುವ ಕಾರಣ ಯೆಲ್ಲೋ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ. ಬಹುತೇಕ ಕಡೆಗಳಲ್ಲಿ ಗುಡುಗು

ಸಹಿತ ಮಳೆ ಸಾಧ್ಯತೆಯಿರುವುದರಿಂದ ಶಾಲಾ-ಕಾಲೇಜುಗಳಿಗೆ ರಜೆಯನ್ನು ನೀಡಲಾಗಿದೆ.

ಜುಲೈ 25 ಅಂದರೆ ನಿನ್ನೆ ವಿವಿಧ ಭಾಗಗಳಲ್ಲಿ ಭಾರೀ ಮಳೆ ಸುರಿಯಿತು. ಆದರೆ ಕೇರಳದ ಮಧ್ಯ ಮತ್ತು ಉತ್ತರ ಜಿಲ್ಲೆಗಳು ಮುಂಗಾರು ಕೊರತೆಯನ್ನು ಎದುರಿಸುತ್ತಿವೆ. 


Leave a Comment