ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ನಿಧನ

Coastal Bulletin
ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ನಿಧನ

ಕೇರಳದ ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ ಚಿಕಿತ್ಸೆ ಫಲಿಸದೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಇವರು ಫೆಬ್ರುವರಿ 12 ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.

ಮುಖ್ಯಮಂತ್ರಿ ಉಮ್ಮನ್ ಚಾಂಡಿಯವರು ಅಕ್ಟೋಬರ್ 31.1943 ರಂದು ಜನಿಸಿದರು. ಇವರು ಕೇರಳದಲ್ಲಿ ಎರಡು ಬಾರಿ ಮುಂಖ್ಯಮಂತ್ರಿಯಾಗಿದ್ದು ಅಪಾರ ಸಾಧನೆ ಮಾಡಿದವರಾಗಿದ್ದರು. 

1967 ರಲ್ಲಿ ರಾಜ್ಯಾಧ್ಯಕ್ಷರಾದರು. ಅಲ್ಲಿಂದಲೇ ರಾಜಕೀಯ ಜೀವನದಲ್ಲಿ ಉನ್ನತಿಗೇರಿದ ಉಮ್ಮನ್ ಚಾಂಡಿ 1969 ರಲ್ಲಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದರು. ಬಳಿಕ 1670 ರಿಂದ ಕೇರಳ ರಾಜ್ಯ ವಿಧಾನಸಭೆಗೆ ನಿರಂತರವಾಗಿ ಆಯ್ಕೆಯಾಗುತ್ತಾ ಅತ್ಯಂತ ದೀರ್ಘಾವಧಿ ಶಾಸಕರಾಗಿ ಪುತ್ತುಪ್ಪಲ್ಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಾ ಬಂದಿದ್ದರು. ವಿಶ್ವಸಂಸ್ಥೆಯಿಂದ ಸಾರ್ವಜನಿಕ ಸೇವೆಗಾಗಿ ಪ್ರಶಸಿಯನ್ನು ಗಳಿಸಿದ ಏಕೈಕ ಭಾರತೀಯ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಯನ್ನೂ ಗಳಿಸಿದ್ದರು. 

2004ರಿಂದ 2006 ಮತ್ತು 2011

ರಿಂದ 2016ರವರೆಗೆ ಕೇರಳದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಇವರು ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯಪಾಲರಾಗಿ, ಕೇರಳ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ನಿರಂತರವಾಗಿ ಸಂವಿಧಾನದ ಆಶಯಗಳ, ಮೌಲ್ಯಗಳ ರಕ್ಷಣೆಗೆ ಶ್ರಮಿಸಿ ಹೋರಾಟ ರಾಜಕಾರಣದ ಪರಂಪರೆಯನ್ನು ಪರಿಣಾಮಕಾರಿಯಾಗಿ ಮುನ್ನಡೆಸಿದ್ದರು. 

ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿಯವರ ಪಾರ್ಥಿವ ಶರೀರವನ್ನು ಅವರ ಸ್ನೇಹಿತ ಮಾಜಿ ಸಚಿವ ಟಿ ಜಾನ್ ಮನೆಗೆ ರವಾನೆ ಮಾಡಲಾಗಿದೆ. 8.30ಕ್ಕೆ ಆಸ್ಪತ್ರೆಯಿಂದ ಪಾರ್ಥಿವ ಶರೀರ ರವಾನೆ ಮಾಡಲಾಗಿದ್ದು, ಬೆಳಿಗ್ಗೆ 11 ಗಂಟೆಯವರೆಗೆ ಜಾನ್ ಅವರ ಮನೆಯಲ್ಲಿ ಪಾರ್ಥಿವ ಶರೀರ ದರ್ಶನಕ್ಕೆ ಅವಕಾಶವಿರುತ್ತದೆ. 


Leave a Comment