Coastal Bulletin

ಬಂಟ್ವಾಳ: ಕರ್ನಾಟಕ ರಾಜ್ಯ ಟೈಲರ್‍ಸ್ ಅಸೋಸಿಯೇಷನ್ ಇದರ ಬಂಟ್ವಾಳ ಕ್ಷೇತ್ರ ಸಮಿತಿ ಆಶ್ರಯದಲ್ಲಿ ಕೆಎಸ್‌ಟಿಎ ಸಂಸ್ಥಾಪನಾ ದಿನಾಚರಣೆ ಹಾಗೂ ಅಶಕ್ತರಿಗೆ ಉಚಿತ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮ ಮಾ. 7 ರಂದು ಸೋಮವಾರ ಬೆಳಿಗ್ಗೆ 10ಕ್ಕೆ ಬಿ.ಸಿ.ರೋಡಿನ ಗೀತಾಂಜಲಿ ಸಭಾಂಗಣದಲ್ಲಿ ನಡೆಯಲಿದೆ

ಶಾಸಕ ರಾಜೇಶ್ ನಾಯ್ಕ್ ಕಾರ್ಯಕ್ರಮ ಉದ್ಘಾಟಿಸುವರು, ಸಮಿತಿ ಅಧ್ಯಕ್ಷ ನಾಗೇಶ್ ಎಂ. ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ರಶ್ಮಿ ಎಸ್. ಆರ್. ರಾಜ್ಯ ಉಪಾಧ್ಯಕ್ಷ ಸುರೇಶ್ ಸಾಲ್ಯಾನ್, ಜಿಲ್ಲಾ

ಕೋಶಾಧಿಕಾರಿ ಈಶ್ವರ್ ಕುಲಾಲ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸತೀಶ್ ಕುಮಾರ್, ಬಂಟ್ವಾಳ ಪುರಸಭೆ ಅಧ್ಯಕ್ಷ ಮಹಮ್ಮದ್ ಶರೀಫ್, ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ಶನ್ಫತ್ ಶರೀಫ್ ಮೊದಲಾದ ಗಣ್ಯರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ

Leave a Comment