ರಾಜ್ಯದ ಜನರು ಶಾಂತಿ, ಸಾಮರಸ್ಯ ಹಾಗೂ ಸೌಹಾರ್ದತೆಯಿಂದ ಬದುಕಬೇಕಾದರೆ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯ್ದೆ 2022ಮತ್ತು ಕರ್ನಾಟಕ ಧಾರ್ಮಿಕ ಸ್ವಾತಂತ್ರ‍್ಯ ಸಂರಕ್ಷಣೆ ಹಕ್ಕು (ಮತಾಂತರ ನಿಷೇಧ) ಕಾಯ್ದೆಯನ್ನು ಹಿಂಪಡೆಯಬಾರದು ಎಂದು ಮಠಾದೀಶರು ಒತ್ತಾಯಿಸಿದ್ದಾರೆ.
ವಿಶ್ವ ಹೊಂದೂ ಪರಿಷತ್ ನಗರದಲ್ಲಿ ಭಾನುವಾರ ಹಮ್ಮಿಕೊಂಡ ಸಂತ ಸಮ್ಮೇಳನ ದಲ್ಲಿ 10ಕ್ಕೂ ಅಧಿಕ ಮಠಾಧೀಶರು ಭಾಗವಹಿಸಿ, ಎರಡು ನಿರ್ಣಯಗಳನ್ನು ಕೈಗೊಂಡರು.
ಮೇಲುಕೋಟೆ ಯತಿರಾಜ ಮಠದ ಯದುಗಿರಿ ಯತಿರಾಜ
ನಾರಾಯಣ ರಾಮಾನುಜ ಜೀಯರ್ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ಗೋಹತ್ಯೆ, ಮತಾಂತರ, ಲವ್ ಜಿಹಾದ್, ಹಿಂದೂ ಅವಿಭಕ್ತ ಕುಟುಂಬ ಪದ್ಧತಿ, ಪರಿಸರ, ಸಾಮರಸ್ಯ ಸೇರಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿಲಾಗಿದೆ.















