Coastal Bulletin

ಟೈಟಾನಿಕ್ ಹಡಗಿನ ಅವಶೇಷಗಳನ್ನು ನೋಡಲು ಜಲಾಂತರ್ಗಾಮಿ ನೌಕೆಯಲ್ಲಿ ತೆರಳಿ ನಾಪತ್ತೆಯಾಗಿದ್ದ ಐವರು ಸಿಬ್ಬಂದಿ ಇನ್ನೂ ಜೀವಂತ ಇರುವ ಸಾಧ್ಯತೆ ಇದೆ ಹಾಗೂ ಪಾಕಿಸ್ತಾನದ ಪ್ರಮುಖ ಉದ್ಯಮಿ ಹಾಗೂ ಅವರ ಪುತ್ರ ಕೂಡ ಇದ್ದಾರೆ ಎಂದು ರಕ್ಷಣಾ ತಂಡ ಮಹತ್ವದ ಸುಳಿವು ನೀಡಿದೆ.

ಓಪನ್‌ಗೇಟ್ ಎಕ್ಸ್ ಪೆಂಡಿಷನ್ಸ್ ಕಂಪೆನಿಗೆ ಸೇರಿದ್ದ ಟೂರಿಸ್ಟ್ ಕ್ರಾಫ್ಟ್ ಭಾನುವಾರ ಸಾಗರಕ್ಕಿಳಿದ ಕೇವಲ ಎರಡು ಗಂಟೆಗಳಲ್ಲಿ ಸಂಪರ್ಕವನ್ನು ಕಡಿದುಕೊಂಡಿದೆ. ಅದು ೯೬ ಗಂಟೆಗಳ ಆಮ್ಲಜನಕ ಪೂರೈಕೆ ಹೊಂದಿದ್ದು, ನಾಪತ್ತೆಯಾಗಿರುವ ಜಲಾಂತರ್ಗಾಮಿಯೊಂದಿಗೆ ಸಂಪರ್ಕವನ್ನು ಮರುಸ್ಥಾಪಿಸಲು ಹಾಗೂ ಅದನ್ನು ಸುರಕ್ಷಿತವಾಗಿ ಕರೆತರಲು ಅನೇಕ ಸರ್ಕಾರಿ ಸಂಸ್ಥೆಗಳು ಹಾಗೂ ಕಂಪೆನಿಗಳು ಜಂಟಿಯಾಗಿ ಕಾರ್ಯನಿರ್ವಹಿಸುತ್ತಿವೆ. ಆದರೆ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. 

ಸದ್ಯ ನಾಪತ್ತೆಯಾಗಿರುವ ಜಲಾಂತರ್ಗಾಮಿಯಲ್ಲಿ ಪ್ರಯಾಣಿಸುತ್ತಿದ್ದ

ಐವರಲ್ಲಿ ಪಾಕಿಸ್ತಾನದ ಶ್ರೀಮಂತ ಉದ್ಯಮಿಗಳಲ್ಲೊಬ್ಬರಾದ ಶಹಜಾದಾ ದಾವೂದ್ ಹಾಗೂ ಅವರ ಮಗ ಹುಸೇನೆ ದಾವೂದ್ ಇದ್ದರು ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ. ನಾಪತ್ತೆಯಾಗಿರುವ ಶಹಜಾದಾ ದಾವೂದ್ ಖ್ಯಾತ ಎಂಗ್ರೋ ಕಂಪೆನಿಯ ಉಪಾಧ್ಯಕ್ಷರಾಗಿದ್ದು, ಎಂಗ್ರೋ ಇಂಧನ, ಕೃಷಿ, ಪೆಟ್ರೋಕೆಮಿಕಲ್ಸ್ ಹಾಗೂ ದೂರಸಂಪರ್ಕದಲ್ಲಿ ಹೂಡಿಕೆ ಮಾಡುವ ಸಂಸ್ಥೆಯಾಗಿದೆ. ಮಾತ್ರವಲ್ಲ ನಾಪತ್ತೆಯಾಗಿರುವ ಜಲಾಂತರ್ಗಾಮಿಯಲ್ಲಿ ಪ್ರಯಾಣಿಸುತ್ತಿದ್ದ ಮತ್ತೊಬ್ಬ ಪ್ರಯಾಣಿಕನನ್ನು ಬ್ರಿಟಿಷ್ ಉದ್ಯಮಿ ಎಂದು ಗುರುತಿಸಲಾಗಿದೆ. 


Leave a Comment