Coastal Bulletin

ಪುತ್ತೂರಿನ ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿಯ ಆಶಾ ಕರ‍್ಯಕರ್ತೆ ಭವ್ಯ (೨೮) ಜೂನ್. ೨೧ ರಂದು ರಾತ್ರಿ ಹೆರಿಗೆ ಸಂದರ್ಭದಲ್ಲಿ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ.

ಭವ್ಯ ಅವರಿಗೆ ಇದು 3ನೇ ಹೆರಿಗೆಯಾಗಿದ್ದು, ಜೂನ್ 19ರಂದು ಸೋಮವಾರ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮರುದಿನ ರಾತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಅವರು ಹೆರಿಗೆಯಾಗುತ್ತಲೇ ತೀವ್ರ ರೀತಿಯಲ್ಲಿ ರಕ್ತಸ್ರಾವ ಉಂಟಾಗಿದೆ ಕೂಡಲೇ ಅವರನ್ನು ಮಂಗಳೂರಿನ ವೆನ್‌ಲಾಕ್

ಆಸ್ಪತ್ರೆಗೆ ಕರೆದೊಯ್ಯಲಾಗಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಜೂನ್ 21 ರಂದು ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. 

ಮೃತರು ಪತಿ ಬಾಲಕೃಷ್ಣ ಗೌಡ, 4ನೇ ತರಗತಿ ಕಲಿಯುತ್ತಿರುವ ಪುತ್ರ ಭವಿಷ್ 3ನೇ ತರಗತಿಯ ಸ್ವಸ್ತಿಕ್ ಮತ್ತು ಹಸುಗೂಸು ಗಂಡು ಮಗುವನ್ನು ಆಗಲಿದ್ದಾರೆ. 


Leave a Comment