ಸ್ಪೀಕರ್ ಯು.ಟಿ ಖಾದರ್ ಅವರಿಗೆ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ ಪ್ರಧಾನ

Coastal Bulletin
ಸ್ಪೀಕರ್ ಯು.ಟಿ ಖಾದರ್ ಅವರಿಗೆ ‘ದಿ ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿ ಪ್ರಧಾನ

ಕರ್ನಾಟಕ ವಿಧಾನಸಭೆಯ ಸ್ವೀಕರ್ ಯು.ಟಿ ಖಾದರ್ ಅವರು ಇಂಡಿಯನ್ ಕಾನ್ಫರೆನ್ಸ್ ಆಫ್ ಇಂಟೆಲೆಕ್ಚುವಕ್ಸ್ ಸಂಸ್ಥೆಯ ವತಿಯಿಂದ ನೀಡುವ ‘ಗ್ರೇಟ್ ಸನ್ ಆಫ್ ಇಂಡಿಯಾ’ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ನಿನ್ನೆ ಹೊಸದಿಲ್ಲಿಯ ಇಂಡಿಯಾ ಇಂಟರ್ ನ್ಯಾಷನಲ್ ಸೆಂಟರ್‌ನಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಯು.ಟಿ ಖಾದರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಇಂಡಿಯನ್ ಕಾನ್ಫರೆನ್ಸ್ ಆಫ್ ಇಂಟೆಲೆಕ್ಚವಲ್ಸ್ ಸಂಸ್ಥೆಯ ಅಧ್ಯಕ್ಷ, ಒಡಿಶಾ ಹೈಕೋರ್ಟ್ ನ

ನಿವೃತ್ತ ಮುಖ್ಯ ನ್ಯಾಯಾಧೀಶ ಹಾಗೂ ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾ.ಗೋಪಾಲ್ ಗೌಡ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. 

ಈ ಸಂದರ್ಭದಲ್ಲಿ ಛತ್ತಿಸ್‌ಗಢ್ ರಾಜ್ಯಪಾಲರಾದ ಬಿಸ್ವ ಭೂಷಣ ಹರಿಚರಣ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು. 


Leave a Comment