ಬೆಳ್ತಂಗಡಿ: ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕನ ಮೃತ್ಯು

Coastal Bulletin
ಬೆಳ್ತಂಗಡಿ: ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕನ ಮೃತ್ಯು

ಮನೆಯಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ ಸಾವನ್ನಪ್ಪಿದ ಘಟನೆಯು ಭಾನುವಾರದಂದು ಬೆಳ್ತಂಗಡಿಯ ದಿಡುಪೆಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರರ ಮೊದಲ ಮಗ 8ನೇ ತರಗತಿ ವಿದ್ಯಾರ್ಥಿ ಶ್ರೀಷಾ (14) ಮನೆಯ ಅಂಗಳದಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಆಕಸ್ಮಿಕವಾಗಿ ಕುತ್ತಿಗೆಗೆ ಸಿಲುಕಿ ನೆಲಕ್ಕೆ ಬಿದ್ದಿದ್ದು ತಂಗಿ ನೋಡಿ ತಂದೆಗೆ ಮಾಹಿತಿ  ನೀಡಿದ್ದು,

ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾನೆ ಎಂದು ಮೂಲಗಳು ತಿಳಿಸಿದೆ.

ಬಾಲಕನ ಶವ ಪರೀಕ್ಷೆಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದ್ದು, ಘಟನೆ ಬಗ್ಗೆ ಬೆಳ್ತಂಗಡಿ ಪೊಲೀಸ್ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ. 

Leave a Comment