ಕನ್ನಡ ಚಿತ್ರರಂಗದ ಸ್ಟಾರ್ ನಟ ಸುದೀಪ್ ಮತ್ತು ನಿರ್ಮಾಪಕ ಎನ್‌ಎಂ ಕುಮಾರ್ ನಡುವಿನ ಮನಸ್ತಾಪ ದಿನಕ್ಕೊಂದು ರೂಪ ಪಡೆಯುತ್ತಿತ್ತು. ಈಗಾಗಲೇ ಕುಮಾರ್ ಮಾಡಿರುವ ಆರೋಪಕ್ಕೆ ಸುದೀಪ್ ಕಾನೂನಿನ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದಾರೆ.
ಆದರೆ ನಿರ್ಮಾಪಕ ಎಂಎನ್ ಕುಮಾರ್ ರಾಜು ಸಂಧಾನದ ಮೂಲಕ ಸಮಸ್ಯೆಯನ್ನು ನಿವಾರಿಸಿಕೊಳ್ಳುವ ಎಂದವರು ನಿನ್ನೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಧರಣಿ ಕುಳಿತಿದ್ದಾರೆ. ಈ ಎಲ್ಲಾ ಘಟನೆಗಳ ಬಗ್ಗೆ ತಿಳಿದುಕೊಂಡ ನಟ, ನಿರ್ಮಾಪಕ ಮತ್ತು ನಿರ್ದೇಶಕ ಕ್ರೇಜಿಸ್ಟಾರ್ ರವಿಚಂದ್ರನ್ ಈ ವಿಷಯ ಕುರಿತು ಚರ್ಚಿಸಿದ್ದಾರೆ.
ನಿರ್ಮಾಪಕರ ಜೊತೆ ಮಾತನಾಡಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ರವಿಚಂದ್ರನ್ ‘ನಾನು ಕೇವಲ ಮಾತನ್ನು ನಂಬಲ್ಲ, ದಾಖಲೆ ಕೊಡಬೇಕು. ದಾಖಲೆ ಮುಂದಿಟ್ಟು ಮಾತಾಡ್ಬೇಕು. ಮನಸ್ಥಿತಿ, ಪರಿಸ್ಥಿತಿ ಎರಡೂ ಬ್ಯಾಲೆನ್ಸ್
ಮಾಡಬೇಕು. ಫಸ್ಟ್ ಕೂಲ್ ಮಾಡೋಣ. ತೊಂದರೆ ಏನಂತ ಗೊತ್ತಿಲ್ಲದೇ ಸಪೋರ್ಟ್ ಮಾಡೋಕೆ ಆಗಲ್ಲ. ನಾನು ೩೦ವವರ್ಷಗಳ ಹಿಂದೆ ಒಂದು ಪುಸ್ತಕ ಮಾಡಿಕೊಟ್ಟಿದೆ. ಹೇಗೆ ಅಸೋಸಿಯೇಷನ್ ಮಾಡಬೇಕು ಅಂತ. ಯಾರು ಫಾಲೋ ಮಾಡಿಲ್ಲ ಮನವಿ ಮಾಡ್ದೆ. ಅದು ಸುದೀಪ್ ಗೆ ಬೇಜಾರ್ ಆಗಿದೆ. ಸುದೀಪ್ ನ ನಾನು ಕರಿಸೋದಿಲ್ಲ, ನಾನೇ ಹೋಗಿ ಮಾತಾಡ್ತೀನಿ. ಸುದೀಪ್ ಗೆ ಸರಿ ಅನಿಸಿದರೆ ಮಾತ್ರ ಹೋಗಿ ಮಾತಾಡ್ತೀನಿ. ಕುಮಾರ್ ದು ತಪ್ಪು ಅಂದರೆ ಡೈರೆಕ್ಟ್ ಆಗಿ ಬೈತೀನಿ ಎಂದು ತಿಳಿಸಿದ್ದಾರೆ.















