ನೆಲ್ಯಾಡಿ: ಕೆಟ್ಟುನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ-ಸವಾರ ಸ್ಥಳದಲ್ಲೇ ಮೃತ್ಯು

Coastal Bulletin
ನೆಲ್ಯಾಡಿ: ಕೆಟ್ಟುನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ-ಸವಾರ ಸ್ಥಳದಲ್ಲೇ ಮೃತ್ಯು

ನಿನ್ನೆ ರಾತ್ರಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಣ್ಣಂಪಾಡಿ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೃತಪಟ್ಟ ಬೈಕ್ ಸವಾರರನ್ನು ನೆಲ್ಯಾಡಿ ಗ್ರಾಮದ ಮೊರಂಕಳ ನಿವಾಸಿ ಹಮ್ಮಬ್ಬರವರ ಪುತ್ರ ಇಕ್ಬಾಲ್ (25) ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಇಕ್ಬಾಲ್‌ರವರು ಸ್ಥಳದಲ್ಲೇ

ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಇಕ್ಬಾಲ್‌ರವರು ತಂದೆ, ತಾಯಿ, ಸಹೋದರ ಹಾಗೂ ಸಹೋದರಿಯರನ್ನು ಆಗಲಿದ್ದಾರೆ. 


Leave a Comment