ಬೈಕ್‌ಗೆ ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಿನ್ನೆ ಸಂಜೆ ಕಲ್ಲಡ್ಕದಲ್ಲಿ ನಡೆದಿದೆ. ನಿನ್ನೆ ಬೆಳಿಗ್ಗೆ ಪಣೋಲಿಬೈಲು ದೇವಸ್ಥಾನಕ್ಕೆ ಹೋಗಿ ಮನೆಗೆ ವಾಪಾಸ್ಸಾಗುವ ವೇಳೆ ಅಪಘಾತ ನಡೆದಿದೆ.
ಕಲ್ಲಡ್ಕ ಗೋಳ್ತಮಜಲು ಮುರಬೈಲು ನಿವಾಸಿ ಲತೀಶ್ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.
ಕಲ್ಲಡ್ಕದಿಂದ ವಿಟ್ಟ ರಸ್ತೆಯಲ್ಲಿ ಹೋಗುವ ವೇಳೆ ವಿಟ್ಲದಿಂದ ಅತೀ ವೇಗದಿಂದ ಬರುತ್ತಿದ್ದ ಸೆಲಿನಾ ಖಾಸಗಿ ಬಸ್ ಬೈಕ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ
ರಭಸಕ್ಕೆ ಲತೀಶ್‌ಗೆ ಗಂಭೀರವಾಗಿ ಗಾಯವಾಗಿದ್ದು, ಇವರನ್ನು ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲತೀಶ್ ಅವರು ಸಂಜೆ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಟ್ರಾಫಿಕ್ ಎಸ್ ಐ ಸುತೇಶ್ ಸ್ಥಳಕ್ಕೆ ಬೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.















