ಬಿಸಿಸಿಐ ಕಾರ್ಯದರ್ಶಿ ಮತ್ತು ಕೇಂದ್ರ ಗೃಹಮಂತ್ರಿ ಅಮಿತ್ ಶಾ ಸುಪುತ್ರ ಜಯ್ ಶಾ ಅವರು ಭಾನುವಾರ ಇತಿಹಾಸ ಪ್ರಸಿದ್ಧ ನಾಗ ಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.
ಪತ್ನಿ ಸಮೇತ ಭೇಟಿ ನೀಡಿದ ಅವರು ಶ್ರೀ ದೇವರ ದರ್ಶನ ಪಡೆದು, ಸಂಕಲ್ಪ ನೆರವೇರಸಿದರು.
ಬಳಿಕ ದೇವಸ್ಥಾನದ ಆಡಳಿತ ಕಚೇರಿಗೆ ಭೇಟಿ ನೀಡಿದ ಜಯ್ ಶಾ ಅವರನ್ನು ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ
ಅಧ್ಯಕ್ಷ ಮೋಹನರಾಂ ಸುಳ್ಳಿ ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಿದರು. ಜತೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಮತ್ತು ಕ್ಯಾಂಪ್ಕೋ ನಿರ್ದೇಶಕ ಕೃಷ್ಣಪ್ರಸಾದ ಮಡ್ತಿಲ ಉಪಸ್ಥಿತಿ ಇದ್ದರು.















