ನಂದಿನಿಯ ಎಲ್ಲಾ ಮಾದರಿಯ ಹಾಲು ಮತ್ತು ಮೊಸರಿನ ಮಾರಾಟ ದರವನ್ನು ಪ್ರತಿ ಲೀಟರ್‌ಗೆ 3 ರೂ ಹೆಚ್ಚಳ ಮಾಡಲಾಗಿದ್ದು, ಪರಿಷ್ಕೃತ ದರವು ಮಂಗಳವಾರದಿಂದ ಜಾರಿಗೆ ಬಂದಿದೆ.
ಜುಲೈ 21 ರಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಾಲಿನ ದರವನ್ನು 3 ರೂಪಾಯಿಗೆ ಏರಿಕೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೆಎಂಎಫ್ ಅಧಿಕಾರಿಗಳು
ತಿಳಿಸಿದ್ದಾರೆ.
ಹೋಮೋಜಿನೈಸ್ಡ್ ಟೋನ್ಡ್ ಹಾಲು ಪ್ರತಿ ಲೀಟರ್ 43 ರೂ ಇರಲಿದ್ದು, ಅರ್ಧ ಲೀಟರ್ ಹಾಲಿಗೆ 10 ಎಂಎಲ್ ಹಾಲನ್ನು ಹೆಚ್ಚುವರಿಯಾಗಿ ಸೇರಿಸಿ 22ರೂ ನಂತೆ ಮಾರಾಟ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.















