ಮೈಟ್ ಕಾಲೇಜಿಗೆ ಕೀರ್ತಿ ತಂದ ಶ್ರೀಪ್ರಿಯ

Coastal Bulletin
ಮೈಟ್ ಕಾಲೇಜಿಗೆ ಕೀರ್ತಿ ತಂದ ಶ್ರೀಪ್ರಿಯ

ಯುಕ್ತಿಯೊಂದಿದ್ದರೆ ಜಗತ್ತನ್ನೇ ಗೆಲ್ಲಬಹುದು ಎಂಬ ಮಾತಿದೆ. ಯುಕ್ತಿಯ ಜೊತೆ ಶಕ್ತಿಯು ಸೇರಿಕೊಂಡರೆ ಎಲ್ಲ ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸಬಹುದು. ಇಂತಹದೇ ಧೈರ್ಯವನ್ನು ಇಟ್ಟುಕೊಂಡು ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಈ ಬಾರಿ ವಿಶ್ವವಿದ್ಯಾಲಯಕ್ಕೆ 7ನೇ ರಾಂಕ್ ಬರುವ ಮೂಲಕ ಕಾಲೇಜಿಗೆ ಕೀರ್ತಿ ತಂದುಕೊಂಡಿರುವುದೊಂದಿಗೆ ಶ್ರೀಪ್ರಿಯ ಮೊದಲಿಗರಾಗಿದ್ದಾರೆ.

ತಮ್ಮ ಸಾಧನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶ್ರೀಪ್ರಿಯ ಅವರು ಬೆಳ್ತಂಗಡಿ ತಾಲೂಕು ಸುಲ್ಕೇರಿಮೊಗ್ರು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ಸುಬ್ರಹ್ಮಣ್ಯ ಭಟ್ ಅವರ ಪುತ್ರಿಯಾಗಿದ್ದು, ಪ್ರಸ್ತುತ ಮೂಡುಬಿದಿರೆಯ ಮಂಗಳೂರು ಇನ್ಸ್ಟಿಟ್ಯೂಟ್  ಆಫ್ ಟೆಕ್ನಾಲಜಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ. 

ಇವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಪಸ್ಥಿತಿಯಲ್ಲಿ ನಡೆದ ೨೩ನೇ ವಾರ್ಷಿಕ ಘಟಿಕೋತ್ಸವದಲ್ಲಿ ಶ್ರೀಪ್ರಿಯ ಅವರು ಗಣ್ಯರಿಂದ ಪುರಸ್ಕಾರವನ್ನು ಪಡೆದಿದ್ದಾರೆ. 

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪ್ರತಿವರ್ಷ ನಡೆಸುವ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ಸೂಕ್ಷö್ಮವಾಗಿ ಗಮನಿಸುತ್ತಿದ್ದೆ. ಅತ್ಯಂತ ಹೆಚ್ಚು

ಪುನರಾವರ್ತನೆ ಆಗುತ್ತಿದ್ದ ಪ್ರಶ್ನೆಗಳ ಬಗ್ಗೆ ಪ್ರಾಧ್ಯಾಪಕರ ಬಳಿ ಚರ್ಚಿಸಿ ಬಗೆಹರಿಸಿಕೊಳ್ಳುತ್ತಿದ್ದೆ. ಬರೆದು ಕಲಿಯುವ ಅಭ್ಯಾಸ ರೂಢಿಸಿಕೊಂಡಿದ್ದರಿಂದ ಅದು ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುತ್ತಿತ್ತು. ಅಳದಂಗಡಿಯಿಂದ ಮೂಡುಬಿದಿರೆ ಕಾಲೇಜಿಗೆ ಬೆಳಗ್ಗೆ ಬೇಗ ತೆರಳಬೇಕಾದ್ದರಿಂದ ಆ ಸಮಯದಲ್ಲಿ ಓದಲು ಸಮಯ ಸಿಗುತ್ತಿರಲಿಲ್ಲ. ಕಾಲೇಜಿನಿಂದ ವಾಪಾಸ್ ಬಂದ ನಂತರ ಪ್ರತಿದಿನ ರಾತ್ರಿ ೯ರಿಂದ ೧೧ ಗಂಟೆವರೆಗೆ ಹಾಗೂ ಪರೀಕ್ಷೆ ಸಂದರ್ಭದಲ್ಲಿ ಅಧಿಕ ಸಮಯ ಓದುತ್ತಿದ್ದೆ. ನನ್ನ ಸಾಧನೆಗೆ ಪೋಷಕರು ಮತ್ತು ಕಾಲೇಜಿನ ಬೋಧಕ ವರ್ಗ ಕಾರಣ ಎಂದು ಶ್ರೀಪ್ರಿಯ ಅವರು ತಮ್ಮ ಸಾಧನೆಯ ಹಾದಿಯ ಬಗ್ಗೆ ತಿಳಿಸಿದ್ದಾರೆ. 


Leave a Comment