ಬೆಂಗಳೂರು: ಇಂದಿನಿಂದ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಸಾರ್ವಜನಿಕರಿಗೆ ಫ್ಲವರ್ ಶೋ ವೀಕ್ಷಣೆಗೆ ಅವಕಾಶ ಕಲ್ಪಸಲಾಗಿದೆ. ಶನಿವಾರ ಮತ್ತು ಭಾನುವಾರ ರಜಾದಿನಗಳಲ್ಲಿ ವಯಸ್ಕರಿಗೆ 80 ರೂ. ಹಾಗೂ ಮಕ್ಕಳಿಗೆ 30 ರೂ ಟಿಕೆಟ್ ನಿಗದಿಪಡಿಸಲಾಗಿದೆ.
ಇದು ಲಾಲ್‌ಬಾಗ್‌ನಲ್ಲಿ 214 ನೇ ಫ್ಲವರ್ ಶೋ. ಲಾಲ್‌ಬಾಗ್‌ನಲ್ಲಿ ಹೂಗಳಿಂದ ಕರ್ನಾಟಕ ಶಕ್ತಿಸೌಧ ಕಂಗೊಳಿಸುತ್ತಿದ್ದು, 2ಲಕ್ಷ ಹೂಗಳಿಂದ ವಿಧಾನಸೌಧ ನಿರ್ಮಾಣ ಮಾಡಲಾಗಿದೆ. ಫ್ಲವರ್ ಶೋ ವೀಕ್ಷಣೆಗೆ ಜನಸಾಗರವೇ ಹರಿದು ಬರುತ್ತಿದೆ. ಫ್ಲವರ್ ಶೋ ಜೊತೆಗೆ ಇಕ್ಕೆಬನದ ಹಲವು
ಕಲಾಕೃತಿಗಳ ಪ್ರದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಜೊತೆಗೆ, ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಹ ಹಮ್ಮಿಕೊಳ್ಳಲಾಗಿದೆ.
ವಿಕೆಂಟ್ ಹಿನ್ನಲೆಯಲ್ಲಿ ಲಾಲ್‌ಬಾಗ್ ಸುತ್ತಮುತ್ತ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆಯಿದೆ. ಹೀಗಾಗಿ ಮೆಟ್ರೋ ಹಾಗೂ ಬಿಎಂಟಿಸಿ ಬಸ್ಸುಗಳನ್ನು ಬಳಸಿಕೊಳ್ಳುವಂತೆ ತೋಟಗಾರಿಕೆ ಇಲಾಖೆ ಮನವಿ ಮಾಡಿದೆ.















