ತಡ ರಾತ್ರಿಯಲ್ಲಿ ರಾಜ್ಯಪಾಲ ಥಾರ‍್ಚಂದ್ ಗೆಹ್ಲೋಟ್ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಹಿನ್ನಲೆಯಲ್ಲಿ ಜಯದೇವ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ನಂತರ ರಾಜ ಭವನಕ್ಕೆ ಮರಳಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಭಾನುವಾರ ರಾತ್ರಿ ಸುಮಾರು 10 ಗಂಟೆಗೆ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದರು. ರಾತ್ರಿ 10 ರಿಂದ 12.50 ರವರೆಗೆ
ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಚಿಕಿತ್ಸೆ ಬಳಿಕ ರಾತ್ರಿ ಸುಮಾರು 1.30ರ ವೇಳೆಗೆ ರಾಜ್ಯಪಾಲರು ವಿಶ್ರಾಂತಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ.















