ಬೆಳ್ತಂಗಡಿ: ಸೈನೇಡ್ ಸೇವಿಸಿ ಯುವಕ ಆತ್ಮಹತ್ಯೆ

Coastal Bulletin
ಬೆಳ್ತಂಗಡಿ: ಸೈನೇಡ್ ಸೇವಿಸಿ ಯುವಕ ಆತ್ಮಹತ್ಯೆ

ಸೈನೇಟ್ ಸೇವಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಪುಂಜಾಕಟ್ಟೆಯಲ್ಲಿ ನಡೆದಿದೆ. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ನಿವಾಸಿ ಗಣೇಶ ಆಚಾರ್ಯ ಅವರ ಪುತ್ರ ರೂಪೇಶ್ ಆಚಾರ್ಯ(31) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ.

ರೂಪೇಶ್ ಅವರು ಸ್ವರ್ಣ ಕುಸುರಿ ಕೆಲಸಗಾರರಾಗಿದ್ದು, ಸ್ಥಳೀಯ ಸಂಸ್ಥೆಯಲ್ಲಿ ನೌಕರರಾಗಿದ್ದರು. ಇತ್ತೀಚೆಗೆ ಕೆಲಸ ಬಿಟ್ಟಿದ್ದ ಅವರು ಮಧ್ಯಪಾನ ಅಭ್ಯಾಸವಾಗಿತ್ತು. ಗುರುವಾರ ಮಧ್ಯಾಹ್ನ ವೇಳೆ ತನ್ನ

ಕೊಠಡಿಯಲ್ಲಿ ಸೈನೇಡ್ ಸೇವಿಸಿದ್ದಾರೆ. ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿದೆ.

ಗಣೇಶ್ ಅವರು ಮೂವರು ಮಕ್ಕಳಲ್ಲಿ ಹಿರಿಯವನಾಗಿದ್ದು, ವಿವಾಹಿತರಾಗಿದ್ದಾರೆ. ಪತ್ನಿ, ಪುಟ್ಟ ಮಗುವನ್ನು ಆಗಲಿದ್ದಾರೆ. 


Leave a Comment