ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅಭಿಮಾನಿಗಳಿಗೆ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಧ್ರುವ ಸರ್ಜಾ ಮತ್ತು ಪ್ರೇರಣಾ ದಂಪತಿ ತಮ್ಮ ಎರಡನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ.
ಕಳೆದ ವರ್ಷ ಅಕ್ಟೋಬರ್‌ನಲ್ಲಿ ಧ್ರುವ ಸರ್ಜಾ ಮತ್ತು ಪ್ರೇರಣಾ ದಂಪತಿ ಮನೆಗೆ ಹೆಣ್ಣು ಮಗುವಿನ ಆಹ್ವಾನವಾಗಿತ್ತು. ಈಗ ಆ
ಕುಟುಂಬಕ್ಕೆ ಮತ್ತೊಬ್ಬರ ಎಂಟ್ರಿ ಆಗಲಿದೆ ಅನ್ನೋ ಶುಭ ಸುದ್ದಿಯನ್ನು ಧ್ರುವ ಸರ್ಜಾ ತಮ್ಮ ಸೋಷಿಯಲ್ ಮೀಡಿಯಾ ಅಕೌಂಟ್‌ನಲ್ಲಿ ತಿಳಿಸಿದ್ದಾರೆ.















