ಒಂದು ಸಮುದಾಯದ ವಿರುದ್ಧ ಅವಹೇಳನಕಾರಿ ಪದ ಬಳಕೆ ಹಿನ್ನಲೆಯಲ್ಲಿ ನಟ ಹಾಗೂ ನಿರ್ಮಾಪಕ ಉಪೇಂದ್ರ ಅವರ ವಿರುದ್ಧ ಎರಡು ಪ್ರತ್ಯೇಕ ಠಾಣೆಗಳಲ್ಲಿ ಎಫ್‌ಐಆರ್ ದಾಖಲಾಗಿತ್ತು.
ಚೆನ್ನಮ್ಮಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆ ಹಾಗೂ ಹಲಸೂರುಗೇಟ್ ಪೊಲೀಸ್ ಠಾಣೆಗಳಲ್ಲಿ ನಟ ಉಪೇಂದ್ರ ಅವರ ವಿರುದ್ಧ ಎರಡು ಪ್ರತ್ಯೇಕ ಎಫ್‌ಐಆರ್ ದಾಖಲಾಗಿದ್ದವು. ಇತ್ತೀಚೆಗೆ ಮೊದಲನೇ ಎಫ್‌ಐಆರ್ ನಲ್ಲಿ ಕೋರ್ಟ್ ತಡೆಯಾಜ್ಞೆ ನೀಡಿತ್ತು, ಇದೀಗ ಎರಡನೇ ಎಫ್‌ಐಆರ್ ನಲ್ಲೂ ಕೂಡ ಕೋರ್ಟ್
ತಡೆ ನೀಡಿದ್ದು, ನಟ ಉಪೇಂದ್ರ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಉಪೇಂದ್ರ ನೀಡಿದ ಹೇಳೀಕೆ ಬೆನ್ನಲ್ಲೇ ದಲಿತ ಸಂಘಟನೆಗಳಿಂದ ನಟನ ವಿರುದ್ಧ ವಿರೋಧ ವ್ಯಕ್ತವಾಗಿತ್ತು. ಬೆಂಗಳೂರಿನ ಚೆನ್ನಮ್ಮನ ಅಚ್ಚುಕಟ್ಟು ಮತ್ತು ಹಲಸೂರು ಗೇಟ್ ಪೊಲೀಸ್ ಠಾಣೆಗಳಲ್ಲಿ ಎರಡು ಪ್ಯತೇಕ ಎಫ್‌ಐಅರ್ ದಾಖಲಾಗಿದ್ದವು.
















