ಇಂದು ಸಂಜೆ ಚಂದ್ರಯಾನ-3 ನೌಕೆ ಚಂದ್ರನ ಮೇಲೆ ಲ್ಯಾಂಡಿಂಗ್

Coastal Bulletin
ಇಂದು ಸಂಜೆ ಚಂದ್ರಯಾನ-3 ನೌಕೆ ಚಂದ್ರನ ಮೇಲೆ ಲ್ಯಾಂಡಿಂಗ್

ಇಂದು ಸಂಜೆ 6 ಗಂಟೆ 4 ನಿಮಿಷಕ್ಕೆ ಚಂದ್ರಯಾನ-3 ಯೋಜನೆಯ ಭಾಗವಾಗಿರುವ ವಿಕ್ರಂ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವಕ್ಕೆ ಇಳಿಯಲು ಸನ್ನಧವಾಗಿದೆ.

ಜುಲೈ 14ರಂದು ಉಡಾವಣೆಯಾದ ಚಂದ್ರಯಾನ-3 ರ ಲ್ಯಾಂಡರ್ ಮಾಡ್ಯೂಲ್ ಮಿಷನ್ ಪ್ರಾರಂಭವಾದ ೪೨ ದಿನಗಳ ನಂತರ ಇಂದು ಸಾಫ್ಟ್ ಲ್ಯಾಂಡ್ ಆಗಲಿದೆ. ಚಂದ್ರಯಾನ-3 ರ ಮಿಷನ್ ಉದ್ದೇಶಗಳು ಚಂದ್ರನ ಮೇಲ್ಮೆöÊಯಲ್ಲಿ ಸುರಕ್ಷಿತ ಮತ್ತು ಮೃದುವಾದ ಲ್ಯಾಂಡಿಂಗ್ ಅನ್ನು ಪ್ರದರ್ಶಿಸುವುದು, ಚಂದ್ರನ

ಮೇಲೆ ರೋವರ್ ತಿರುಗುವುದನ್ನು ಪ್ರದರ್ಶಿಸುವುದು ಮತ್ತು ಆಂತರಿಕ ವೈಜ್ಞಾನಿಕ ಪ್ರಯೋಗಗಳನ್ನು ನಡೆಸುವುದು ಆಗಿದೆ. 

ಚಂದ್ರಯಾನ-3 ಯಶಸ್ವಿಯಾಗಲೆಂದು ಪ್ರಾರ್ಥಿಸಿ ಮೈಸೂರು ಜಿಲ್ಲಾ ಬ್ರಾಹ್ಮಣ ಸಂಘಟನೆ ಹಾಗೂ ಆರ್ಚಕರ ಸಂಘದಿಂದ ನಗರದ ಇರ್ವಿನ್ ರಸ್ತೆಯ ಶ್ರೀ ಪಂಚಮುಖಿ ಆಂಜನೆಯಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ ಸರ್ವಸಿದ್ದ ಯಾಗ ನಡೆಸಲಾಗಿದೆ.


Leave a Comment