ಮಧುರೈ: ಭಾರತ್ ಗೌರವ್ ವಿಶೇಷ ರೈಲಿನಲ್ಲಿ ಅಗ್ನಿ ಅವಘಢ: 8 ಪ್ರಯಾಣಿಕರ ಸಾವು

Coastal Bulletin
ಮಧುರೈ: ಭಾರತ್ ಗೌರವ್ ವಿಶೇಷ ರೈಲಿನಲ್ಲಿ ಅಗ್ನಿ ಅವಘಢ: 8 ಪ್ರಯಾಣಿಕರ ಸಾವು

ಮಧುರೈ: ಲಕ್ನೋ-ರಾಮೇಶ್ವರ ಭಾರತ್ ಗೌರವ್ ವಿಶೇಷ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿ, 8 ಜನ ಮೃತಪಟ್ಟಿದ್ದು, 20 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ಘಟನೆ ಮಧುರೈ ರೈಲು ನಿಲ್ದಾಣದಲ್ಲಿ ನಡೆದಿದೆ.

ರೈಲಿನಲ್ಲಿದ್ದ ಪ್ರವಾಸಿಗರು ಮುಂಜಾನೆ ಸಿಲಿಂಡರ್‌ನೊಂದಿಗೆ ಅಡುಗೆ ಮಾಡುತ್ತಿದ್ದಾಗ ಸಿಲಿಂಡರ್ ಸೋರಿಕೆಯಾಗಿ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ಪಡೆದ ನಂತರ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದಾರೆ. 

ಆದರೆ ರೈಲಿನಲ್ಲಿದ್ದ

ಕೊನೆಯ ಎರಡು ಬೋಗಿಗಳು ಬೆಂಕಿಯಲ್ಲಿ ಸಂಪೂರ್ಣವಾಗಿ ಸುಟ್ಟುಹೋಗಿವೆ. ಈ ರೈಲು ಮೇ 17 ರಂದು 15 ದಿನಗಳ ಆಧ್ಯಾತ್ಮಿಕ ಪ್ರವಾಸಕ್ಕಾಗಿ ಲಕ್ನೋದಿಂದ ಹೊರಟಿತ್ತು. ಆದರೆ ನಿಲ್ಲಿಸಿದ್ದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಮೂಲಗಳು ತಿಳಿಸಿದೆ. 


Leave a Comment