ರೋಗಿಯೋರ್ವನ್ನು ತುರ್ತಾಗಿ ಮಂಗಳೂರಿಗೆ ಸಾಗಿಸುತ್ತಿದ್ದ ಖಾಸಗಿ ಅಂಬ್ಯುಲೆನ್ಸ್ ವಾಹನವೊಂದು ಅಂಚಿಕಟ್ಟೆ ಎಂಬಲ್ಲಿ ಪಲ್ಟಿಯಾಗಿದ್ದು, ವಾಹನ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶುಕ್ರವಾರದಂದು ನಡೆದಿದೆ.
ಗುರುವಾಯಕೆರೆ ನಿವಾಸಿಯಾಗಿರುವ ಚಾಲಕ ಶಬೀರ್ ಮೃತಪಟ್ಟ ದುರ್ದೈವಿಯಾಗಿದ್ದಾನೆ.
ಅಫಘಾತ ನಡೆದ ವಾಹನದಲ್ಲಿದ್ದ ರೋಗಿಯನ್ನು ಬದಲಿ ವಾಹನದಲ್ಲಿ ಮಂಗಳೂರಿನ ಆಸ್ಪತ್ರೆಗೆ
ಸಾಗಿಸಲಾಗಿದೆ. ಆದರೆ ತುರ್ತುನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಾಲಕ ಚಿಕಿತ್ಸೆಗೆ ಸ್ಪಂದಿಸಿದೆ ಮೃತ ಪಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿದೆ.















