ಪೊಲೀಸ್ ಅಧಿಕಾರಿಯೆಂದು ವಂಚಿಸುತ್ತಿದ್ದ ನರ್ಸಿಂಗ್ ವಿದ್ಯಾರ್ಥಿ ಬಂಧನ

Coastal Bulletin
ಪೊಲೀಸ್ ಅಧಿಕಾರಿಯೆಂದು ವಂಚಿಸುತ್ತಿದ್ದ ನರ್ಸಿಂಗ್ ವಿದ್ಯಾರ್ಥಿ ಬಂಧನ

ಮಂಗಳೂರು: ತಾನು ಪೊಲೀಸ್ ಅಧಿಕಾರಿಯೆಂದು ವಂಚಿಸುತ್ತಿದ್ದ ನರ್ಸಿಂಗ್ ವಿದ್ಯಾರ್ಥಿಯನ್ನು ಮಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಕೇರಳ ಮೂಲದ ವಿದ್ಯಾರ್ಥಿ ಬೆನಡಿಕ್ಟ್ ಸಾಬು (22) ಬಂಧಿತ ವ್ಯಕ್ತಿ ಎಂದು ಗುರುತಿಸಲಾಗಿದೆ.

ಬೆನೆಡಿಕ್ಟ್ ಸಾಬೂ ಮಂಗಳೂರಿನ ಪ್ರತಿಷ್ಠಿತ ನರ್ಸಿಂಗ್ ಕಾಲೇಜಿನ ಪ್ರಥಮ ವರ್ಷದ ನರ್ಸಿಂಗ್ ವಿದ್ಯಾರ್ಥಿಯಾಗಿದ್ದಾನೆ. ಕಾಲೇಜಿನಲ್ಲಿ ನಡೆದ ಜಾಗೃತಿ ಕಾರ್ಯಕ್ರಮದ ವೇಳೆ ಪೊಲೀಸರಿಗೆ ಈ ಬಗ್ಗೆ ಮಾಹಿತಿ ಲಭಿಸಿತ್ತು. ಬಳಿಕ ಪರಿಶೀಲನೆ ನಡೆಸಿದಾಗ ಈತ ನಕಲಿ ಪೊಲೀಸ್ ಎಂದು ತಿಳಿದು ಬಂದಿದೆ. ಅಲ್ಲದೆ ಆತನಿಂದ ವಂಚನೆಗೊಳಗಾದ

ಯಾವುದೇ ವ್ತಕ್ತಿಗಳು ಉರ್ವ ಪೊಲೀಸ್ ಠಾಣೆ ಅಥವಾ ನಗರ ಪೊಲೀಸರನ್ನು ಸಂಪರ್ಕಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ. 

ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ರವರ ಮಾರ್ಗದರ್ಶನದಲ್ಲಿ, ಪೊಲೀಸ್ ಉಪ ಆಯುಕ್ತರಾದ ಅಂಶು ಕುಮಾರ್ ಮತ್ತು ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸೆಂಟ್ರಲ್ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಮಹೇಶ್ ಕುಮಾರ್ ಸೂಚನೆಯಂತೆ ಉರ್ವ ಪೊಲೀಸರು ಕಾರ್ಯಚರಣೆ ನಡೆಸಿದ್ದಾರೆ. 


Leave a Comment