ಬಂಡೀಪುರ ಪರಿಸರ ಸೂಕ್ಷ್ಮ ವಲಯಕ್ಕೆ ಸೇರಿರುವ ಗುಂಡ್ಲುಪೇಟೆ ತಾಲೂಕಿನ ಜಕ್ಕಳ್ಳಿಯಲ್ಲಿ ಮನೆ ನಿರ್ಮಿಸುವ ಕೆಲಸ ಆರಂಭಿಸಿ ವಿವಾದಕ್ಕೆ ಸಿಲುಕಿದ್ದ ಚಿತ್ರ ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ರಾಜ್ಯ ಹೈಕೋರ್ಟ್ ನಲ್ಲೂ ಹಿನ್ನಡೆಯಾಗಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಹೋಬಳಿಯ ಜಕ್ಕಳ್ಳಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿ ಅರಣ್ಯ ಇಲಾಖೆ ನೀಡಿದ್ದ ನೋಡಿಸ್ ಪ್ರಶ್ನಿಸಿ ನಟ ಗಣೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಬಂಡೀಪುರ
ಹುಲಿ ಸಂರಕ್ಷಿತ ಪ್ರದೇಶ ಹಾಗೂ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಶಾಶ್ವತ ಕಟ್ಟಡ ನಿರ್ಮಾಣಕ್ಕೆ ಅವಕಾಶ ನೀಡಲಾಗದು ಎಂದು ಹೇಳಿದೆ.
ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ತಾತ್ಕಾಲಿಕ ವಾಸದ ಮನೆ ನಿರ್ಮಾಣಕ್ಕೆ ಮಾತ್ರ ಅವಕಾಶವಿದೆ. ಇದರ ಜೊತೆಗೆ, ಯಾವುದೇ ಬೃಹತ್ ಮತ್ತು ಶಾಶ್ವತ ಕಟ್ಟಡ ನಿಮಾಣಕ್ಕೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದೆ.















