Coastal Bulletin

ರಿಕ್ಷಾ ಪಲ್ಟಿಯಾಗಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಸಮೀಪದ ಮಾಣಿಲ ತಿರುವಿನಲ್ಲಿ ನಡೆದಿದೆ. ಅಟೋ ಚಾಲಕನನ್ನು ಸುಬ್ರಹ್ಮಣ್ಯ, ಪಂಜ ನಿವಾಸಿ ಸುದರ್ಶನ್ (35) ಮೃತಪಟ್ಟವರಾಗಿದ್ದಾರೆ.

ಜೂನ್ 27 ರಂದು ಮುಂಜಾನೆ ಸುದರ್ಶನ್ ಹಾಗೂ ಇನ್ನೊಬ್ಬರು ಮಾಣಿಲ ಬಾವಲಿ ಮೂಲೆಗೆ ಬರುತ್ತಿದ್ದ ವೇಳೆ ಮಾಣಿಲ ತಿರುವಿನಲ್ಲಿ ಈ ಅಪಘಾತ ನಡೆದಿದೆ. ಅಪಘಾತದ ತೀವ್ರತೆಗೆ ಚಾಲಕ ಸುದರ್ಶನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜತೆಗಿದ್ದ ಪ್ರಯಾಣಿಕ ಅಲ್ಪ ಸ್ವಲ್ಪ ಗಾಯಗಳೊಂದಿಗೆ ಪ್ರಾಣಾಪಯದಿಂದ

ಪಾರಾಗಿದ್ದಾರೆಂದು ಮೂಲಗಳಿಂದ ತಿಳಿದು ಬಂದಿದೆ.ಸದ್ಯ ಅವರನ್ನು  ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ. 

ಅಪಘಾತವು ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಮಹಜರು ನಡೆಸಿದ್ದು, ಅಪಘಾತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ. 


Leave a Comment