Coastal Bulletin

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನೂತನ ಕಾಂಗ್ರೆಸ್ ಸರ್ಕಾರ ಸ್ಥಾಪನೆಗೊಂಡು ಸರಕಾರ ರಚನೆಯಾದ ಬಳಿಕ ನಡೆಯಲಿರುವ ಮೊದಲ ಬಜೆಟ್ ಅಧಿವೇಶನವು ಇಂದಿನಿಂದ ಆರಂಭಗೊಳ್ಳುತ್ತಿದ್ದು ಆಡಳಿತ ಹಾಗೂ ಪ್ರತಿಪಕ್ಷಗಳ ನಡುವಿನ ವಾಕ್ ಸಮರಕ್ಕೆ ವೇದಿಕೆ ಸಿದ್ಧಗೊಂಡಿದೆ. ಇಂದು ಮಧ್ಯಾಹ್ನ 12 ಗಂಟೆಗೆ ರಾಜ್ಯಪಾಲ ತಾವರ್ ಚಂದ್ ಗೆಹಲೊಟ್ ವಿಧಾನ ಮಂಡಲದ ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ವಿವಾದಾತ್ಮಕ ತಿದ್ದುಪಡಿ ಕಾಯ್ದೆಗಳನ್ನು ರದ್ದುಗೊಳಿಸುವ ಕಾಂಗ್ರೆಸ್ ಸರಕಾರದ ನಿರ್ಧಾರವನ್ನು ಬಿಜೆಪಿ ವಿರೋಧಿಸುವ ಸಾಧ್ಯತೆಯಿದೆ. 10 ದಿನಗಳ ಕಾಳ ಅಧಿವೇಶನ ನಡೆಯಲಿದ್ದು, 8 ದಿನಗಳ ಕಾಲ ಪ್ರಶ್ನೋತ್ತರ ಅವಧಿ ನಿಗದಿಯಾಗಿದೆ. ಬಜೆಟ್ ಅಧಿವೇಶನದ ಹಿನ್ನಲೆಯಲ್ಲಿ ಇಂದಿನಿಂದ ಜುಲೈ 14ರವರೆಗೆ ವಿಧಾನಸೌಧ ಸುತ್ತಮುತ್ತ ಕರ್ಫ್ಯೂ ವಿಧಿಸಿ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಆದೇಶ ಹೊರಡಿಸಿದ್ದಾರೆ. 

ಜೂನ್ 3 ರಿಂದ

14 ರವರೆಗೆ ವಿಧಾನಸೌಧದ ಸುತ್ತಲಿನ 2ಕಿ.ಮೀ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ನಿಷೇಧಾಜ್ಞೆ ಜಾರಿಯಲ್ಲಿರುವ ಸ್ಥಳದಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪುಗೂಡುವುದು, ಮೆರವಣಿಗೆ ಮತ್ತು ಸಭೆ ನಡೆಸುವುದನ್ನು ನಿಷೇಧಿಸಲಾಗಿದೆ. ಶಸ್ತ್ರಾಸ್ತ್ರಗಳು, ಕೋಲುಗಳು, ಕತ್ತಿಗಳು, ಈಟಿಗಳು, ಕೈಬಂದೂಕುಗಳಿ ಅಥವಾ ಯಾವುದೇ ಸ್ಪೋಟಕಗಳು, ಕಲ್ಲುಗಳು, ಕ್ಷಿಪಣಿಗಳನ್ನು ಎಸೆಯುವ ಸಾಧನಗಳು ಅಥವಾ ಉಪಕರಣಗಳನ್ನು ಒಯ್ಯುವುದು ಮತ್ತು ಸಂಗ್ರಹಿಸುವುದು ನಿಷೇಧಿಸಲಾಗಿದೆ. 


Leave a Comment