Coastal Bulletin

ಮಂಗಳೂರು: ಮತಾಂತರ ಹಾಗೂ ಗೋಹತ್ಯೆ ನಿಷೇಧ ಕಾಯ್ದೆಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಬಾರದು ಒಂದು ವೇಳೆ ಇವುಗಳನ್ನು ಸರ್ಕಾರ ರದ್ದುಗೊಳಿಸಿದರೆ ಸಮಾಜದಲ್ಲಿ ಸಾಮರಸ್ಯಕ್ಕೆ ತೊಂದರೆ ಉಂಟಾಗಬಹುದು. ಮಾತ್ರವಲ್ಲ ಸರ್ಕಾರದ ವಿರುದ್ಧ ಸ್ವಾಮೀಜಿಗಳು, ಸಾಧುಸಂತರು ರಾಜ್ಯವ್ಯಾಪಿ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಕರಾವಳಿಯ ಸ್ವಾಮೀಜಿಗಳ ಸಮಾವೇಶದಲ್ಲಿ ಎಚ್ಚರಿಕೆಯನ್ನು ನೀಡಿದ್ದಾರೆ.

ಬಾಲಂಭಟ್ ಹಾಲ್‌ನಲ್ಲಿ ಶುಕ್ರವಾರದಂದು ನಡೆದ ಸಮಾವೇಶದಲ್ಲಿ ಮಾತನಾಡಿದ ಒಡಿಯೂರಿನ ಶ್ರೀಗುರುದೇವಾನಂದ ಸ್ವಾಮೀಜಿ ಮತಾಂತರ ನಿಷೇಧ ಕಾಯ್ದೆಯನ್ನು ಯಾವುದೇ ಕಾರಣಕ್ಕೂ ಅಧಿವೇಶನದಲ್ಲಿ ವಾಪಸ್ ಪಡೆಯಬಾರದು. ಎಷ್ಟೇ ವಯಸ್ಸಾಗಿದ್ದರೂ ಗೋವಂಶ ಹತ್ಯೆಗೆ ಅವಕಾಶ ನೀಡಬಾರದು. ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯ್ದೆ 2020 ಮತ್ತು ಅದರ ನಿಯಾಮಾವಳಿಯನ್ನು ವಾಪಸ್ ಪಡೆಯಬಾರದು. ಅದನ್ನು ಕಟ್ಟುನಿಟ್ಟು ಜಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. 

ವಜ್ರದೇಹಿ ಮಠದ ಶ್ರೀರಾಜಶೇಖರಾನಂದ ಸ್ವಾಮೀಜಿ, ಮಾಣಿಲ ಶ್ರೀ ಮಹಾಲಕ್ಷ್ಮೀ

ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಕೇಮಾರಿನ ಶ್ರೀಈಶ ವಿಠಲದಾಸ ಸ್ವಾಮೀಜಿ, ಕೊಂಡೆವೂರು ನಿತ್ಯಾನಂದ ಯೋಗಾಶ್ರಮದ ಶ್ರೀಯೋಗಾನಂದ ಸರಸ್ವತಿ ಸ್ವಾಮೀಜಿ, ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರ ತೀರ್ಥ ಶ್ರೀಪಾದರು, ಚಿಲಿಂಬಿ ಮಠದ ಮಾತಾಶ್ರೀ ಶಿವಜ್ಞಾನಮಯಿ ಸರಸ್ವತಿ, ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಸ್ನೇಹ ಮಾತಾಜಿ, ಕನ್ಯಾನ ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದ ಶ್ರೀ ಮಹಾಬಲೇಶ್ವರ ಸ್ವಾಮೀಜಿ, ವಿಶ್ವಹಿಂದು ಪರಿಷತ್ ಮುಖಂಡ ಪ್ರೊ.ಎಂ.ಬಿ ಪುರಾಣಿಕ್. ಆರ್‌ಎಸ್‌ಎಸ್ ಸಹಕಾರ್ಯವಾಹ ಪ್ರಕಾಶ್ ಪಿ.ಎಸ್ ಇದ್ದರು. 


Leave a Comment