Coastal Bulletin

ವಿಧಾನ ಮಂಡಲ ಅಧಿವೇಶನ ಆರಂಭವಾಗಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಉಭಯ ಸದನವನ್ನು ಉದ್ದೇಶಿಸಿ ಮಾತನಾಡಿದರು. ಇದೇ ವೇಳೆ ಮಾತನಾಡಿದ ಅವರು ಕುವೆಂಪು ಸೇರಿದಂತೆ ನಾಡಿನ ನಾನಾ ಕವಿಗಳ ಆಶಯವನ್ನು ತಿಳಿಸಿದರು.

ಸರ್ಕಾರ ಬಡವರು, ಆರ್ಥಿಕ ಹಿಂದುಳಿದವರ ಪರವಾಗಿ ನಿಲ್ಲುತ್ತದೆ. ಸರ್ಕಾರ ಆಧುನಿಕ ಕರ್ನಾಟಕ ನಿರ್ಮಾಣ ಮಾಡಲು ಉದ್ದೇಶಿಸಿದೆ. ಶಾಲಾ ಶಿಕ್ಷಣವು ಸಮಾಜದ ಅಡಿಪಾಯವೆಂದು ಗುರುತಿಸಲ್ಪಟ್ಟಿದೆ. ಪ್ರತಿ ಮಗುವಿನ ಮೂಲಭೂತ ಹಕ್ಕನ್ನು ಸಂರಕ್ಷಿಸಲು ಸರ್ಕಾರ ಬದ್ಧ. ಶಿಕ್ಷಣ ಜತೆಗೆ ಮಕ್ಕಳ ಆರೋಗ್ಯ ರಕ್ಷಣೆಯೂ ಸರ್ಕಾರದ ಜವಾಬ್ದಾರಿ ಎಂದು ಹೇಳಿದರು.

ಬಸವಣ್ಣನ ತತ್ವದಡಿ ರಾಜ್ಯ ಸರ್ಕಾರ ನಡೆಯುತ್ತಿದೆ. ಸರ್ಕಾರ ಎಲ್ಲಾ ಸಮುದಾಯಗಳ ಪರವಾಗಿ ಕಾರ್ಯನಿರ್ವಹಣೆ

ಮಾಡುತ್ತಿದೆ. ಇನ್ನೂ ರಾಜ್ಯದ ಸರ್ವೋತ್ತಮ ಅಭಿವೃದ್ದಿಗೆ ಬದ್ದವಾಗಿದ್ದು, ಈ ನಿಟ್ಟಿನಲ್ಲಿ ಎಲ್ಲಾ ರೀತಿಯಲ್ಲಿ ಪ್ರಯತ್ನ ನಡೆಸಲಾಗುವುದು. ಅನ್ನದಾತದ ಯೋಜನೆಯ ಮೂಲಕ ಎಲ್ಲರಿಗೂ ೫ ಕೆಜಿ ಅಕ್ಕಿಯನ್ನು ನೀಡಲಾಗುವುದು. ಈ ಮೂಲಕ ಹಸಿವು ಮುಕ್ತ ಕರ್ನಾಟಕವನ್ನು ಮಾಡಲಾಗುವುದು. ಈ ಯೋಜನೆ ಆರಂಭದಲ್ಲಿ ಸದ್ಯ ಹಣವನ್ನು ಡಿಬಿಟಿ ಮೂಲಕ ಹಣವನ್ನು ನೀಡಲಾಗುವುದು. ಇಂದಿರಾ ಕ್ಯಾಂಟಿನ್ ಮೂಲಕ ಹಸಿವು ನೀಗಿಸುವುದಕ್ಕೆ ಮುಂದಾಗಿದ್ದಾವೆ ಎಂದು ತಿಳಿಸಿದರು. 


Leave a Comment