Coastal Bulletin

ಮೈಸೂರು ಸ್ಯಾಂಡಲ್ ಸೋಪ್‌ಗೆ ಮತ್ತೆ ಬ್ರ‍್ಯಾಂಡ್ ಮೌಲ್ಯ ತಂದುಕೊಟ್ಟು ಮಾರುಕಟ್ಟೆಯಲ್ಲಿ ಮಾರಾಟ ಪ್ರಮಾಣ ಹೆಚ್ಚಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸೋಪನ್ನು ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಆರಂಭಿಸಿದ ಉತ್ಪನ್ನ. ಅದು ರಾಜ್ಯದ ಮಕುಟಮಣಿಯ ಅನರ್ಘ್ಯರತ್ನವಾಗಿದೆ. ಅವರ ಆಶಯಕ್ಕೆ ತಕ್ಕಂತೆ ಈ ಹೆಜ್ಜೆ ಇಡಲು ಸರ್ಕಾರ ತೀರ್ಮಾನಿಸಿದೆ.  


ಮೈಸೂರು ಸ್ಯಾಂಡಲ್‌ಸೋಪ್ ರಾಜ್ಯದ ಸಾಬೂನು ಮಾರುಕಟ್ಟೆಯಲ್ಲಿ ಸಿಂಹಪಾಲು ಹೊಂದಿಲ್ಲ. ಹಾಗೆಯೇ, ಈ ಬ್ರ‍್ಯಾಂಡ್ ಉತ್ಪನ್ನ ದಕ್ಷಿಣ ಭಾರತಕಷ್ಟೇ ಸೀಮಿತವಾಗಿದೆ. ಮಾರುಕಟ್ಟೆಯಲ್ಲಿ ಉಳಿದ ಹೆಸರಿನ ಸಾಬೂನುಗಳು ಅತ್ಯಧಿಕ ಪ್ರಮಾಣದಲ್ಲಿ ಮಾರಟವಾಗುತ್ತಿವೆ. ಒಟ್ಟು ವಹಿವಾಟಿನಲ್ಲಿ ಶೇಕಡಾ 3ರಷ್ಟು ಮಾತ್ರ ರಫ್ತು ವಹಿವಾಟಿನ ಮೂಲಕ ಬರುತ್ತಿದೆ ಉದ್ಯಮಿಗಳು ಈ ನಿಟ್ಟಿನಲ್ಲಿ ಸೂಕ್ತ ಸಲಹೆಗಳನ್ನು ಕೊಟ್ಟು, ಸರಕಾರದ ಪ್ರಯತ್ನಕ್ಕೆ ಕೈಗೊಡಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ

ಸಚಿವ ಎಂ.ಬಿ ಪಾಟೀಲ ಮನವಿ ಮಾಡಿದ್ದಾರೆ. 

ಹಿಂದಿನ ಸರ್ಕಾರದ ಆಡಳಿತಾವಧಿಯಲ್ಲೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಕೆಎಸ್‌ಡಿಎಲ್ ಕಾರ್ಯಚಟುವಟಿಕೆ, ಬಂಡವಾಳ, ಆಧುನಿಕ ಯಂತ್ರೋಪಕರಣ, ಆಕರ್ಷಕ ಉತ್ಪನ್ನಗಳ ತಯಾರಿಕೆ, ಮಾರುಕಟ್ಟೆ ವಿಸ್ತರಣೆಯು ದೊಡ್ಡ ಪ್ರಮಾಣದಲ್ಲಿ ಆಗಬೇಕು. ಕೆಎಸ್‌ಡಿಎಲ್ ಉತ್ಪನ್ನಗಳ ಮಾರುಕಟ್ಟೆ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಬಳಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಹೊಸ ಚಿಂತನೆಯಿಂದ ಡಿಜಿಟಲ್ ಮಾರುಕಟ್ಟೆಯಲ್ಲಿ ಮುನ್ನುಗಬೇಕು ಎಂದು ಕರೆ ನೀಡಿದ್ದಾರೆ. 


Leave a Comment