Coastal Bulletin

ತೆಲಂಗಾಣದ ಹೈದರಾಬಾದ್‌ನಲ್ಲಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಹೈದರಾಬಾದ್‌ನ ಹೈದರ್‌ಶಕೋಟಿ ಮುಖ್ಯರಸ್ತೆಯಲ್ಲಿ ಮೂವರು ಬೆಳಗಿನ ವಾಕ್ ಮಾಡುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ತಾಯಿ ಮತ್ತು ಮಗು ಬೆಳಗಿನ ಹೊತ್ತು ವಾಕಿಂಗ್‌ಗೆ ಹೊರಟಿದ್ದಾಗ ಬಂಡ್ಲಗುಡ ರಸ್ತೆಯಲ್ಲಿ ಕಾರು ಅವರಿಗೆ ಡಿಕ್ಕಿ ಹೊಡೆದಿದೆ. ತಾಯಿ ಮತ್ತು ಮಗು ಹಾಗೂ ಮತ್ತೊಬ್ಬ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಬಳಿಕ ಕಾರು ಚಾಲಕ ಕಾರು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ಪೊಲೀಸರು ಸ್ಥಳಕ್ಕಾಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ

ರವಾನಿಸಿದ್ದಾರೆ. ಮೃತ ಮೂವರ ಮೃತದೇಹಗಳನ್ನು ಉಸ್ಮಾನಿಯಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದು, ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

ಕಾರು ಅತಿವೇಗ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ತಿಳಿಸಿದ್ದಾರೆ. ಇದೀಗ ಈ ಘಟನೆಗೆ ಸಂಬಂಧಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. 


Leave a Comment