ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಆರೆಂಜ್ ಅಲರ್ಟ ಘೋಷಣೆಯನ್ನು ಮಾಡಲಾಗಿದೆ.
ಮಾತ್ರವಲ್ಲ ಮುಂಜಾಗ್ರತಾ ಕ್ರಮವಾಗಿ ಜು.6ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಫೌಢಶಾಲೆ, ಪದವಿ ಪೂರ್ವ ಕಾಲೇಜು ಮತ್ತು ಸರಕಾರಿ ಅನುದಾನಿತ
ಮತ್ತು ಖಾಸಗಿ ವಿದ್ಯಾಸಂಸೆಗಳಿಗೆ ರಜೆ ಘೋಷಿಸಲಾಗಿದೆ.
ಭಾರತೀಯ ಹವಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು.6 ರವರೆಗೆ ರೆಡ್ ಅಲರ್ಟ್ ಘೋಷಣೆಯಾಗಿದೆ.















