Coastal Bulletin

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಮುಂದುವರಿದಿರುವ ಭಾರೀ ಮಳೆ ಮತ್ತು ಜಲಾವೃತ ಮತ್ತು ಭೂಕುಸಿತದಿಂದ ಹಲವು ಪ್ರದೇಶಗಳಲ್ಲಿ ಸಂಚಾರ ಅಸ್ತವ್ಯಸ್ತವಾಗಿರುವ ಹಿನ್ನಲೆಯಲ್ಲಿ, ನಾಳೆ ಜುಲೈ 6ರಂದು ಗುರುವಾರ ಜಿಲ್ಲೆಯ ವೃತ್ತಿಪರ ಕಾಲೇಜುಗಳು ಸೇರಿದಂತೆ, ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಇಂಪಶೇಖರ್ ಕೆ ಅವರು ರಜೆ ಘೋಷಿಸಿದ್ದಾರೆ.

ಕೇರಳದಲ್ಲಿ ಬುಧವಾರ ಮುಂಗಾರು ಮಳೆ ಅರ್ಭಟ ಜೋರಾಗಿದ್ದು, ಹಲವೆಡೆ ರಸ್ತೆಗಳು ಜಲಾವೃತಗೊಂಡಿದೆ, ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ. ರಾಜ್ಯದ 14 ಜಿಲ್ಲೆಗಳ ಪೈಕಿ ಕಾಸರಗೋಡು ಸೇರಿದಂತೆ 11 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. 

ಮಂಗಳವಾರ ರಾತ್ರಿ ರಾಜ್ಯಾದ್ಯಂತ

ಭಾರೀ ಗಾಳಿ, ಮಳೆಯಿಂದಾಗಿ ಹಲವೆರೆ ಮರಗಿಡಗಳು ಧರಾಶಾಯಿಯಾಗಿವೆ. ಹಲವೆಡೆ ಮರಗಳು ಬಿದ್ದು ಮನೆಗಳು ನೆಲಸಮಗೊಂಡಿದೆ. ನದಿಗಳು ಉಕ್ಕಿ ಹರಿಯುತ್ತಿವೆ. ಭಾರೀ ಮಳೆಯಿಂದಾಗಿ ಪತ್ತನಂತಿಟ್ಟ ಜಿಲ್ಲೆಯಲ್ಲಿ ಅಟೋರಿಕ್ಷಾವೊಂದು ಉಕ್ಕಿ ಹರಿಯುತ್ತಿರುವ ನದಿಗೆ ಬಿದ್ದುದರಿಂದ ಚಾಲಕ ಮೃತಪಟ್ಟಿದ್ದಾನೆ.  


Leave a Comment