ಶಿಕ್ಷಣ ಇಲಾಖೆಯ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ದೈವದ ಕೋಲ ಪ್ರದರ್ಶನಕ್ಕೆ ಅವಕಾಶ ನೀಡಿದ ಕಾರಣ ಆದೇಶ ನೀಡಿರುವ ವಿಚಾರಕ್ಕೆ ಸಂಬಂಧಿಸಿ ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಸುನಿಲ್ ಕುಮಾರ್ ಪ್ರಸ್ತಾಪ ಮಾಡಿದರು.
ದಕ್ಷಿಣ ಕನ್ನಡ ಸೇರಿದಂತೆ ಮೂರ್ನಾಲ್ಕು ಜಿಲ್ಲೆಗಳಲ್ಲಿ ದೈವಾರಾಧನೆ ಪದ್ಧತಿ ಇದೆ. ಆದರೆ ಕೆಲವೊಂದು ಜಾನಪದ ನೃತ್ಯದೊಂದಿಗೆ ದೈವರಾಧನೆ ಕೂಡ ಸೇರಿಸಲಾಗಿದೆ. ತುಳುನಾಡಿನ ಧಾರ್ಮಿಕ ಆರಾಧನೆಯಾದ ದೈವ ಕೋಲವು ಪ್ರದರ್ಶನದ ವಸ್ತು ಅಲ್ಲ ಎಂದು ಮಾಜಿ ಸಚಿವ ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ವಿಧಾನಸಭೆಯಲ್ಲಿ ಹೇಳಿದ್ದಾರೆ.
.ದೈವಾರಾಧನೆಯು ತುಳುನಾಡಿನ
ಆರಾಧನೆಯಲ್ಲಿ ಪ್ರಮುಖವಾದದ್ದು. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ದೈವರಾಧನೆ ಸಂಪ್ರದಾಯ ಆಚರಣೆಯಲ್ಲಿದೆ. ಪ್ರತಿಭಾ ಕಾರಂಜಿಯಲ್ಲಿ ಜಾನಪದ ವಿಭಾಗದಲ್ಲಿ ದೈವಕೋಲಕ್ಕೆ ಶಿಕ್ಷಣ ಇಲಾಖೆ ಅವಕಾಶ ನೀಡಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಪ್ರಾಥಮಿಕ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇದರ ಬಗ್ಗೆ ಪರಿಶೀಲನೆ ಮಾಡುವುದಾಗಿ ಭರವಸೆ ನೀಡಿದರು.















