ಕೇರಳದ ಭಾರೀ ಮಳೆ ಮುಂದುವರೆದಿದ್ದು, ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಎಂಟು ಮಂದಿ ಪ್ರಾಣ ಕಳೆದುಕೊಂಡಿದ್ದು, 12 ಜಿಲ್ಲೆಗಳಲ್ಲಿ ಮಳೆ ಅಲರ್ಟ್ ಅನ್ನು ಭಾರತೀಯ ಹವಮಾನ ಇಲಾಖೆ ಘೋಷಿಸಿದೆ.
ಕಾಸರಗೋಡು ಜಿಲ್ಲೆಯಲ್ಲಿ ಮಳೆಯಿಂದಾಗಿ ಹಲವು ಭಾಗದಲ್ಲಿ ರಸ್ತೆಗಳು ಹಾಳಾಗಿ ಹೋಗಿವೆ. ಪಣತ್ತೂರು ಬಳಿ ಭೂಕುಸಿತ ಉಂಟಾಗಿ ರಸ್ತೆ ಅಡಚಣೆಯಾಗಿದೆ. ಮುಂದಿನ ಎರಡು ದಿನ ಭಾರೀ ಮಳೆ ಬೀಳುವ ಸೂಚನೆ ಇರುವುದರಿಂದ ಕೇರಳ, ಕರ್ನಾಟಕ, ಲಕ್ಷದ್ವೀಪ ಭಾಗದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ತೆರಳದಂತೆ ಸೂಚನೆ ನೀಡಲಾಗಿದೆ.
ಕಣ್ಣೂರು ಹಾಗೂ ಅಲಪುಜ
ಜಿಲ್ಲೆಯಲ್ಲಿ ತಲಾ ಒಬ್ಬರು ಬುಧವಾರ ಸಂಜೆ ಮೃತಪಟ್ಟಿದ್ದು, ಹನ್ನೊಂದು ಮಂದಿ ಗಾಯಗೊಂಡಿದ್ದಾರೆ. ಎರಡು ಮನೆಗಳು ಸಂಪೂರ್ಣ ಕುಸಿದು ಹೋಗಿದ್ದು, 135 ಮನೆಗಳು ಭಾಗಶಃ ಕುಸಿದು ಬಿದ್ದಿವೆ. ಎರ್ನಾಕುಲಂ, ಕೊಟ್ಟಾಯಂ, ಇಡುಕ್ಕಿ, ಪಾಲಕ್ಕಾಡ್, ಕೋಜಿಕ್ಕೋಡ್, ತ್ರಿಶ್ಯೂರ್, ಕಣ್ಣೂರು ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.















