ಶೀಘ್ರದಲ್ಲೇ ನಂದಿನಿ ಹಾಲಿನ ದರ 5 ರೂ ಹೆಚ್ಚಳ

Coastal Bulletin
ಶೀಘ್ರದಲ್ಲೇ ನಂದಿನಿ ಹಾಲಿನ ದರ 5 ರೂ ಹೆಚ್ಚಳ

ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ. ಅದೇನೆಂದರೆ ನಂದಿನಿ ಹಾಲಿನ ದರವು ಲೀಟರ್‌ಗೆ 5 ರೂ ಏರಿಕೆ ಮಾಡಬೇಕೆಂದು ಕೆಎಂಎಫ್ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗಿದೆ. ನಿನ್ನೆ ನಡೆಸಿರುವ ಹಾಲು ಒಕ್ಕೂಟಗಳು, ನಂದಿನಿ ಹಾಲಿನ ದರ ಪರಿಷ್ಕರಣೆಗೆ 14 ಹಾಲಿನ ಒಕ್ಕೂಟಗಳು ಪಟ್ಟು ಹಿಡಿದಿದ್ದು, ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ.

ಜುಲೈ 11 ರಂದು ನಂದಿನಿ ಹಾಳಿನ ದರವನ್ನು ಏರಿಸಲು ರಾಜ್ಯ  ಸರ್ಕಾರ ಮುಂದೆ ಬೇಡಿಕೆ ಸಲ್ಲಿಸಿರುವ ಕರ್ನಾಟಕ ಹಾಲು ಮಹಾಮಂಡಳದ ಆಡಳಿತ ಮಂಡಳು ಈ ಕುರಿತು ಸಿಎಂ ಸಿದ್ದರಾಮಯ್ಯ ಜೊತೆಗೆ ಚರ್ಚಿಸಿ ಅಂತಿಮ ನಿರ್ಧಾರ ಪ್ರಕಟಿಸಲಿದೆ

ಎನ್ನಲಾಗಿದೆ. 

ನಂದಿನಿ ಹಾಲಿನ ದರ 5  ರೂಪಾಯಿ ಏರಿಸಲು ರಾಜ್ಯ ಸರ್ಕಾರ ಮುಂದೆ ಬೇಡಿಕೆ ಇಟ್ಟಿದ್ದೇವೆ, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕೆಎಂಎಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ್ ಹೇಳಿದ್ದಾರೆ. 


Leave a Comment