ಬೆಳ್ತಂಗಡಿ: ಐತಿಹಾಸಿಕ ಪ್ರವಾಸಿ ತಾಣವಾಗಿರುವ ನಡ ಗ್ರಾಮದಲ್ಲಿರುವ ಸಾವಿರ ಅಡಿ ಎತ್ತರದ ಗಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ.
ವಿಪರೀತ ಮಳೆಯ ಕಾರಣ ಬಂಡೆಯಲ್ಲಿ ನೀರು ಹರಿಯುತ್ತಿರುವ ಮತ್ತು ಮೆಟ್ಟಿಲುಗಳಲ್ಲಿ ಪಾಚಿ ಬೆಳೆದು ಜಾರುವ ಅಪಾಯ ಇರುವ ಹಿನ್ನಲೆಯಲ್ಲಿ
ಜು.7 ರಿಂದ ಮುಂದಿನ ಆದೇಶದ ತನಕ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ವನ್ಯಜೀವಿ ವಿಭಾಗದ ಬೆಳ್ತಂಗಡಿ ವಲಯಾರಣ್ಯಧಿಕಾರಿ ಸ್ವಾತಿ ಅವರು ತಿಳಿಸಿದ್ದಾರೆ.















