ಕರ್ನಾಟಕದಲ್ಲಿ ತಲೆ ಎತ್ತಲಿದೆ ವಿಶ್ವದ ಅತೀ ಎತ್ತರದ ಬಾಲಸುಬ್ರಹ್ಮಣ್ಯ ಮೂರ್ತಿ

Coastal Bulletin
ಕರ್ನಾಟಕದಲ್ಲಿ ತಲೆ ಎತ್ತಲಿದೆ ವಿಶ್ವದ ಅತೀ ಎತ್ತರದ ಬಾಲಸುಬ್ರಹ್ಮಣ್ಯ ಮೂರ್ತಿ

ಶಿವಮೊಗ್ಗ: ನಗರದ ಗುಡ್ಡೇಕಲ್ ದೇವಸ್ಥಾನ ಆವರಣದಲ್ಲಿ ಜಗತ್ತಿನ ಅತಿ ಎತ್ತರದ 151 ಅಡಿಗಳ ಶ್ರೀ ಬಾಲಸುಬ್ರಹ್ಮಣ್ಯ ಮೂರ್ತಿ ಪ್ರತಿಷ್ಠಾಪನೆಗೆ ಭಾನುವಾರ ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜನ ಮುರುಘರಾಜೇಂದ್ರ ಸ್ವಾಮೀಜಿ, ಸಂಸದ ಬಿ.ವೈ ರಾಘವೇಂದ್ರ ಶಿಲಾನ್ಯಾಸ ನೆರವೇರಿಸಿದರು.

 ಗುಡ್ಡೇಕಲ್ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಡಿ ರಾಜಶೇಖರ್ ಸುದ್ದಿಗಾರರೊಂದಿಗೆ  ಮಾತನಾಡಿ, ಮಲೇಷಿಯಾ ದೇಶದ ಬಟು ಗುಹೆಗಳ ಬಳಿ ಇರುವ ಮುರುಗನ್ ಪ್ರತಿಮೆ 140 ಅಡಿ ಎತ್ತರದ್ದು. ಈಜೆಗೆ ತಮಿಳುನಾಡಿನ ಸೇಲಂನಲ್ಲಿ 146 ಅಡಿ ಎತ್ತರಮ ಮುರುಗನ್ ಪ್ರತಿಮೆ ನಿರ್ಮಿಸಲಾಗಿದೆ. ಇದು ಜಗತ್ತಿನ ಅತಿ ಎತ್ತರದ ಪ್ರತಿಮೆಯಾಗಿದೆ. ಈಗ ಶಿವಮೊಗ್ಗದಲ್ಲಿ

ನಿರ್ಮಿಸುತ್ತಿರುವುದು ಜಗತ್ತಿನ ಅತೀ ಎತ್ತರದ ಬಾಲಸುಬ್ರಹ್ಮಣ್ಯ ಸ್ವಾಮಿ ಪ್ರತಿಮೆ ಎಂಬ ಹೆಗ್ಗಳಿಕೆ ಪಾತ್ರವಾಗಲಿದೆ ಎಂದು ತಿಳಿಸಿದರು.

ಪಾಲಿಕೆ ಮೇಯರ್ ಶಿವಕುಮಾರ್, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ, ಪಾಲಿಕೆ ಸದಸ್ಯೆ ಯಮುನಾ ರಂಗೇಗೌಡ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಡಿ. ರಾಜಶೇಕರ್, ಪ್ರಮುಖರಾದ ಎನ್. ರಮೇಶ್ ಸೇರಿ ಹಲವಾರು ಇದ್ದರು. 


Leave a Comment