ಸ್ಯಾಂಡಲ್‌ವುಡ್ ನಿರ್ಮಾಪಕ ಎಂಎನ್ ಕುಮಾರ್ ಅವರು ಕೆಲವು ದಿನಗಳ ಹಿಂದೆ ಸುದ್ದಿಗೋಷ್ಠಿ ನಡೆಸಿದ ಕಿಚ್ಚ ಸುದೀಪ್ ಅವರಿಗೆ ಒಂದು ಸಿನಿಮಾದ ಅಡ್ವಾನ್ಸ್ ಕೊಟ್ಟಿದ್ದೇನೆ, ಆದರೆ ಅವರು ಕೈಗೆ ಸಿಗುತ್ತಿಲ್ಲ. 10 ಕೋಟಿ ಹಣ ತೆಗೆದುಕೊಂಡು ಈಗ ಹಣಕೊಟ್ಟು ಬೇಡುವ ಸ್ಥಿತಿ ಬಂದಿದೆ ಎಂದು ಮಾಡಿದ ಆರೋಪಗಳಿಗೆ ನಟ ಕಿಚ್ಚ ಸುದೀಪ್ ಖಡಕ್ ಉತ್ತರ ನೀಡಿದ್ದಾರೆ.
ಕುಮಾರ್ ಮಾಡಿದ ಆರೋಪಕ್ಕೆ ಉತ್ತರ ನೀಡಿದ ಸುದೀಪ್ ೧೦ ಕೋಟಿ ರೂ ಪರಿಹಾರ ನೀಡುವಂತೆ ನೋಟಿಸ್ ಕಳುಹಿಸಿದ್ದಾರೆ ಹಾಗೆಯೇ ಕ್ರಿಮಿನಲ್ ಕೇಸ್ ಕೂಡ ದಾಖಲಿಸಿದ್ದಾರೆ. ಕಿಚ್ಚ ಕನ್ನಡ ಚಿತ್ರರಂಗದಲ್ಲಿ 20 ವರ್ಷದಿಂದ ನಟಿಸುತ್ತಿದ್ದಾರೆ, ಸಮಾಜ ಸೇವೆಯ ಮೂಲಕ ಹಲವರಿಗೂ ಮಾದರಿಯಾಗಿದ್ದಾರೆ, ನೀವು
ಮಾಡಿರುವ ಆರೋಪ ಸುಳ್ಳಾಗಿದ್ದು, ಮಾನಹಾನಿ ಉಂಟು ಮಾಡಿದ್ದೀರಾ? ನೀವು ಕ್ಷಮೆಯಾಚಿಸಬೇಕು ಹಾಗೂ ಪರಿಹಾರ ನೀಡಬೇಕು ಎಂದು ಸುದೀಪ್ ಪರ ವಕೀಲರು ಲೀಗಲ್ ನೋಟಿಸ್ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಆಧಾರ ರಹಿತ ಆರೋಪ ಮಾಡಿದ್ದಾರೆ. ಆದ್ದರಿಂದ ಮಾಧ್ಯಮಗಳ ಮೂಲಕ ಕ್ಷಮೆಯಾಚಿಸಬೇಕೆಂದು ನೋಟಿಸ್‌ನಲ್ಲಿ ತಾಕೀತು ಮಾಡಿದ್ದಾರೆ.
















