ಪುತ್ತೂರಿನಲ್ಲಿ ಸರ್ಕಾರಿ ಬಸ್‌ನಲ್ಲಿ ಮಹಿಳೆಯೊಂದಿಗೆ ಸಹ ಪ್ರಯಾಣಿಕನೊಬ್ಬ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದೆ. ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಹಾಯಕ ಅರ್ಚಕನಾಗಿ ಕೆಲಸ ಮಾಡುತ್ತಿರುವ ಆರೋಪಿಯನ್ನು ಬಂಧಿಸಿ ನ್ಯಾಯಾಲಕ್ಕೆ ಹಾಜರುಪಡಿಸಿಲಾಗಿದೆ.
20 ವರ್ಷದ ಯುವತಿಯೊಬ್ಬಳು ಉಪ್ಪಳ-ಪುತ್ತೂರು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ತನ್ನ ತಾಯಿಯೊಂದಿಗೆ ಪುತ್ತೂರಿಗೆ ಪ್ರಯಾಣಿಸುತ್ತಿದ್ದಳು. ಈ ವೇಳೆ ಯುವತಿಯ ಹಿಂದೆ ಕುಳಿತಿದ್ದ ಅಪರಿಚಿತ ವ್ಯಕ್ತಿ ತನ್ನನ್ನು ಮುಟ್ಟಿದ್ದಾರೆ. ಎರಡನೇ ಬಾರಿಯೂ ಇದೇ ರೀತಿ ಮಾಡಿದಾಗ ಮಹಿಳೆ
ಸರಿಸಿ ಕುಳಿತಿದ್ದಾಳೆ. ಬಳಿಕ ಆ ವ್ಯಕ್ತಿ ಪುತ್ತೂರಿನ ಬೊಳ್ವಾರ ಬಳಿ ಬಸ್‌ನಿಂದ ಇಳಿದಿದ್ದಾನೆ ಎಂದು ಮಹಿಳೆ ತಿಳಿಸಿದ್ದಾರೆ.
ಈ ಬಗ್ಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು ಐಪಿಸಿ ಸೆಕ್ಷನ್ 354 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ.















