ನವದೆಹಲಿ: ಪ್ರಸ್ತುತ ಸಾಂಕ್ರಾಮಿಕ ರೋಗದ ಕೋವಿಡ್ ಹಿನ್ನೆಲೆಯಲ್ಲಿ ಚಾಲನಾ ಪರವಾನಗಿ (DL), ನೋಂದಣಿ ಪ್ರಮಾಣಪತ್ರ (RC) ಮತ್ತು ಪರವಾನಗಿಗಳಂತಹ ಮೋಟಾರು ವಾಹನ ದಾಖಲೆಗಳ ಮಾನ್ಯತೆಯನ್ನು ಕೇಂದ್ರವು 2021 ಸೆಪ್ಟೆಂಬರ್ 30ರ ವರೆಗೆ ವಿಸ್ತರಿಸಿದೆ.
ಫಿಟ್‌ನೆಸ್, ಪರ್ಮಿಟ್ (ಎಲ್ಲಾ ರೀತಿಯ), ಪರವಾನಗಿ, ನೋಂದಣಿ ಅಥವಾ ಇತರ ಯಾವುದೇ ಸಂಬಂಧಿತ ದಾಖಲೆ (ಗಳ) ಮಾನ್ಯತೆಯನ್ನು ಸೆಪ್ಟೆಂಬರ್ 30 ರವರೆಗೆ ಮಾನ್ಯವಾಗಿ
ಪರಿಗಣಿಸಬಹುದು ಎಂದು ಜಾರಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಸಾರಿಗೆ ಸಚಿವಾಲಯ ಗುರುವಾರ ಟ್ವೀಟ್‌ನಲ್ಲಿ ತಿಳಿಸಿದೆ.
Advertisement