ಜಮ್ಮು ಮತ್ತು ಕಾಶ್ಮೀರ: ಸೊಪೋರ್ ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ 3 ಜನ ಎಲ್ಇಟಿ ಭಯೋತ್ಪಾದಕರು ಹತರಾಗಿದ್ದಾರೆ.ಇವರಲ್ಲಿ ಮುನಾಸೀರ್ ಪಂಡಿತ್ ಎಂಬ ಮೋಸ್ಟ್ ವಾಂಟೆಡ್ ಉಗ್ರ ಸೇರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಸೊಪೋರ್‌ನ ಗುಂಡ್ ಬ್ರಾತ್ ಪ್ರದೇಶದಲ್ಲಿ ಭಾನುವಾರ ಮತ್ತು ಸೋಮವಾರ ಮಧ್ಯರಾತ್ರಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ (ಎಲ್‌ಇಟಿ) ಗೆ ಸಂಬಂಧಿಸಿದ ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಇತ್ತೀಚೆಗೆ 3 ಪೊಲೀಸರು, 2
ಕೌನ್ಸಿಲರ್‌ಗಳು ಮತ್ತು 2 ನಾಗರಿಕರ ಹತ್ಯೆಯಲ್ಲಿ ಭಾಗಿಯಾಗಿದ್ದ ಎಲ್‌ಇಟಿ ಭಯೋತ್ಪಾದಕ ಮುದಾಸೀರ್ ಪಂಡಿತ್ ಅವರು ಸೊಪೋರ್ ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ್ದಾನೆ. ಎನ್‌ಕೌಂಟರ್‌ನಲ್ಲಿ ಒಟ್ಟು ಮೂವರು ಎಲ್‌ಇಟಿ ಭಯೋತ್ಪಾದಕರು ಹತರಾಗಿದ್ದಾರೆ ”ಎಂದು ಕಾಶ್ಮೀರದ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ವಿಜಯ್ ಕುಮಾರ್ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.














