Coastal Bulletin

ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ ತಮ್ಮ ರಿಷಬ್ ಶೆಟ್ಟಿ ಫಿಲಂಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ ‘ಲಾಫಿಂಗ್ ಬುದ್ಧ’ ಚಿತ್ರದ ಚಿತ್ರೀಕರಣ ಮುಕ್ತಯವಾಗಿದೆ. ಒಂದು ಕಡೆ ರಿಷಬ್ ಶೆಟ್ಟಿ ತಮ್ಮ ನಿರ್ದೇಶನದ ಕಾಂತಾರ ಸಿನಿಮಾದ ಚಿತ್ರಿಕರಣಕ್ಕೆ ರೆಡಿ ಆಗುತ್ತಿದ್ದರೆ, ಮತ್ತೊಂದು ಕಡೆ ತಮ್ಮದೇ ನಿರ್ಮಾಣದ ಲಾಫಿಂಗ್ ಬುದ್ಧ ಚಿತ್ರೀಕರಣ ಕಂಪ್ಲೀಟ್ ಮಾಡಿದ್ದಾರೆ.

ಈ ಸಿನಿಮಾದಲ್ಲಿ ಸಾಕಷ್ಟು ವಿಶೇಷತೆಗಳಿವೆ. ಆ ಎಲ್ಲ ವಿಶೇಷತೆಗಳೊಂದಿಗೆ ಸಿನಿಮಾ ಶುರು ಆಗಿತ್ತು. ಈಗ ಸಿನಿಮಾದ ಚಿತ್ರೀಕರಣದ ಕೆಲಸ ಪೂರ್ಣ ಆಗಿದೆ. ಚಿತ್ರೀಕರಣದ ನಂತರದ ಕೆಲಸದಲ್ಲಿ ಸಿನಿಮಾ ತಂಡ ಬ್ಯುಸಿ ಆಗಿದೆ.

ಭದ್ರವತಿ, ಕಾರ್ಗಲ್ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣವಾಗಿದೆ. ಭದ್ರಾವತಿಯ ಚಂಡಿಕಾ ದುರ್ಗ ದೇವಸ್ಥಾನದಲ್ಲಿ ಚಿತ್ರೀಕರಣ ಆರಂಭವಾಗಿತ್ತು. ಇತ್ತೀಚೆಗೆ

ಬೆಂಗಳೂರಿನಲ್ಲಿ ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಆರಂಭವಾಗಿದೆ.  

ಕಾಮಿಡಿ ಹಾಗೂ ಡ್ರಾಮಾ ಜಾನರ್‌ನ ಈ ಚಿತ್ರವನ್ನು ಎಂ.ಭರತ್ ರಾಜ್ ನಿರ್ದೇಶಿಸಿದ್ದಾರೆ. ಪ್ರಮೋದ್ ಶೆಟ್ಟಿ ಹಾಘೂ ತೇಜು ಬೆಳವಾಡಿ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ. ಎಂ.ಭರತ್ ರಾಜ್ ನಿರ್ದೇಶಿಸುತ್ತಿರುವ ಈ ಚಿತ್ರದ ಮುಖ್ಯ ಪಾತ್ರದಲ್ಲಿ ಪ್ರಮೋದ್ ಶೆಟ್ಟಿ ಹಾಗೂ ತೇಜು ಬೆಳವಾಡಿ ನಟಿಸುತ್ತಿದ್ದಾರೆ. 


Leave a Comment