ನಾಲ್ಕು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ
ಬೆಳ್ತಂಗಡಿ :ನಾಲ್ಕು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮೃಗೀಯ ಘಟನೆ ಬೆಳ್ತಂಗಡಿಯ ಕಕ್ಕಿಂಜೆಯಲ್ಲಿ ನಡೆದಿದೆ.
ಕಕ್ಕಿಂಜೆಯ ಕತ್ತರಿಗುಡ್ಡೆ ನಿವಾಸಿ ವಿಫೇಶ್ ಭಂಡಾರಿ ಬಂಧಿತ ಆರೋಪಿಯಾಗಿದ್ದು ನಾಲ್ಕು ವರ್ಷ ಪ್ರಾಯದ ಬಾಲಕಿಯನ್ನು ಮನೆಗೆ ಕರೆದೊಯ್ದು
ಲೈಂಗಿಕ ದೃಶ್ಯಗಳನ್ನು ತೋರಿಸಿ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿಯ ತಂದೆ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದಾರೆ.
ಧರ್ಮಸ್ಥಳ ಠಾಣಾ ಪೊಲೀಸರು ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.















