ಕಾಂಗ್ರೆಸ್ ಸರ್ಕಾರ ನೀಡಿದ್ದ 5 ಗ್ಯಾರಂಟಿಗಳಲ್ಲಿ ಮನೆಯ ಯಜಮಾನಿಗೆ ಮಾಸಿಕ 2 ಸಾವಿರ ರೂ.ನೀಡುವ ಗೃಹಲಕ್ಷ್ಮೀ ಯೋಜನೆಗೆ ಇಂದು ಚಾಲನೆ ನೀಡಲಾಗುತ್ತಿದೆ. ಈ ಚಾಲನೆಯ ಮೂಲಕ ಸರ್ಕಾರದ ನಾಲ್ಕನೆ ಗ್ಯಾರಂಟಿಯು ಅನುಷ್ಠಾನವಾದಂತಾಗಲಿದೆ.
ಶಕ್ತಿ ಯೋಜನೆ, ಅನ್ನಭಾಗ್ಯ ಯೋಜನೆ, ಹೆಚ್ಚುವರಿ ಅಕ್ಕಿಯ ಬದಲು ಹಣ ಖಾತೆಗೆ ಜಮೆ ಆಗುತ್ತಿದೆ, ಗೃಹಜ್ಯೋತಿ ಯೋಜನೆ ಹಾಗೂ ಇದೀಗ ಗೃಹಲಕ್ಷ್ಮೀ ಯೋಜನೆಗೆ ಚಾಲನೆಯನ್ನು ಸಿದ್ದರಾಮಯ್ಯ ನವರು ನೀಡಿದ್ದಾರೆ. ಇನ್ನು ಉಳಿದಿರುವ ಯೋಜನೆ ಎಂದರೆ ಯುವನಿಧಿ ಯೋಜನೆಯೊಂದು ತಡವಾಗಲಿದೆ ಎಂದು ಮೂಲಗಳು ತಿಳಿಸಿವೆ.
ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ
ಮಂಜೂರಾತಿ ಪತ್ರವನ್ನು ಡಿಸಿಎಂ ಡಿ.ಕೆ ಶಿವಕುಮಾರ್ ನೀಡಲಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಯೋಜನೆಯ ಲಾಂಛನ ಹಾಗೂ ಪೋಸ್ಟರ್ ಬಿಡುಗಡೆ ಮಾಡಲಿದ್ದಾರೆ. ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ವಹಿಸುವರು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಉಪಸ್ಥಿತರಿರುವರು.















