Coastal Bulletin

ಇತಿಹಾಸ ಪ್ರಸಿದ್ಧ ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದ ಶ್ರೀ ಹುಲುಗೆಮ್ಮ ದೇವಿ ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ರಾಜ್ಯದಲ್ಲಿ ಲಕ್ಷಾಂತರ ಭಕ್ತರನ್ನು ಹೊಂದಿದ್ದು, ಶಕ್ತಿ ಯೋಜನೆ ಜಾರಿ ಹಿನ್ನಲೆಯಲ್ಲಿ ದೇವಸ್ಥಾನಕ್ಕೆ ಸಾವಿರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದುಕೊಂಡಿದ್ದಾರೆ.

ಒಂದು ತಿಂಗಳಲ್ಲಿ ಹುಲಿಗೆಮ್ಮ ದೇವಿಯ ಹುಂಡಿಯಲ್ಲಿ 1 ಕೋಟಿ ರೂ ಕಾಣಿಕೆ ಸಂಗ್ರಹವಾಗಿದೆ. ಸರ್ಕಾರದಿಂದ ಶಕ್ತಿ ಯೋಜನೆ ಜಾರಿಯಾದ ಹಿನ್ನಲೆಯಲ್ಲಿ ದೇವಸ್ಥಾನಕ್ಕೆ ಬರುವ ಭಕ್ತರ ಸಂಖ್ಯೆ ಕೂಡ ದುಪ್ಪಟ್ಟಾಗಿತ್ತು. ಹೀಗಾಗಿ ಹುಂಡಿಯಲ್ಲಿ ಕಾಣಿಕೆ ಸಂಗ್ರಹ

ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. 

ಈ ದೇವಸ್ಥಾನದಲ್ಲಿ 33 ದಿನಗಳಲ್ಲಿ 99,69,725  ರೂ ಕಾಣಿಕೆ ಸಂಗ್ರಹವಾಗಿದೆ. ಅಲ್ಲದೇ  225 ಗ್ರಾಂ ಚಿನ್ನ, 14 ಕೆಜಿ ಬೆಳ್ಳಿ ಕಾಣಿಕೆಯಾಗಿ ಬಂದಿದೆ ಎಂದು ಮೂಲಗಳು ತಿಳಿಸಿದೆ. 


Leave a Comment