ನಾಳೆ ರಾಜ್ಯದ ಬಜೆಟ್ ಮಂಡನೆ

Coastal Bulletin
ನಾಳೆ ರಾಜ್ಯದ ಬಜೆಟ್ ಮಂಡನೆ

ಸಿಎಂ ಸಿದ್ದರಾಮಯ್ಯ ಅವರು ನಾಳೆ ನೂತನ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಬಜೆಟ್ ಮಂಡಿಸಲಿದ್ದು, ಗ್ಯಾರಂಟಿ ಯೋಜನೆಗಳ ಜೊತೆಗೆ ಇನ್ನೂ ಹಲವಾರು ಜನಪ್ರಿಯ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿದೆ.

 ಸಿಎಂ ಸಿದ್ದರಾಮಯ್ಯ ಅವರು 14ನೇ ಬಾರಿಗೆ ರಾಜ್ಯ ಸರ್ಕಾರದ ಆಯವ್ಯಯ ಮಂಡಿಸಿ ದಾಖಲೆ ನಿರ್ಮಿಸುತ್ತಿದ್ದು, ರಾಜ್ಯದ ಸಮಗ್ರ ಅಭಿವೃದ್ಧಿ ಮತ್ತು ದೂರ ದೃಷ್ಟಿ ಆಲೋಚನೆಗಳನ್ನು ಕ್ರೂಢೀಕರಿಸಿ ಮಹತ್ವದ ಬಜೆಟ್ ಮಂಡನೆ ಮಾಡಲಿದ್ದು, ಚುನಾವಣೆಗೂ ಮುನ್ನ ರಾಜ್ಯ ಕಾಂಗ್ರೆಸ್ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳ ಜೊತೆಗೆ ಹಲವು ಜನಪ್ರಿಯ ಯೋಜನೆಗಳನ್ನು ಘೋಷಣೆ

ಮಾಡುವ ಸಾಧ್ಯತೆ ಇದೆ. 

ಈಗಾಗಲೇ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳ ಜೊತೆಗೆ ಬಜೆಟ್ ಪೂರ್ವ ತಯಾರಿ ಸಭೆಗಳನ್ನು ನಡೆಸಿದ್ದು, ಇದೀಗ ಅಂತಿಮ ಘಟ್ಟದಲ್ಲಿ ಇದೆ. ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇದು ನಿರ್ಣಯಕ ಬಜೆಟ್ ಆಗಿದ್ದು, ಜನಪ್ರಿಯ ಘೋಷಣೆ, ಚುನಾವಣಾ ಲಾಭಾ ತರುವ ಆಯವ್ಯಯ ಮಂಡಿಸಲು ಸಿಎಂ ತಯಾರಿ ನಡೆಸಿದ್ದಾರೆ.  


Leave a Comment